ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಜಾಬ್ ವಿವಾದ: ಪಿಯು ಬೋರ್ಡ್ ನಿರ್ದೇಶಕಿ ಸ್ನೇಹಲ್ ತಲೆ ದಂಡವಾಯ್ತಾ?

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್-ಕೇಸರಿ ವಿವಾದ ಹಿನ್ನೆಲೆ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕರ್ನಾಟಕ ಶಿಕ್ಷಣ ಕಾಯ್ದೆ 1983 ಅನ್ವಯ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಹೈಕೋರ್ಟ್ ತೀರ್ಪು ಬರುವವರಿಗೆ ಈ ವಸ್ತ್ರ ಸಂಹಿತೆ ಪಾಲಿಸಬೇಕು ಎಂದು ಆದೇಶಿಸಲಾಗಿದೆ.

ಈ ಆದೇಶದ ಬೆನ್ನಲ್ಲೇ ಇದೀಗ ಹಿಜಾಬ್ ಹಾಗೂ ಕೇಸರಿ ವಿವಾದಕ್ಕೆ ಪಿಯು ಬೋರ್ಡ್ ನಿರ್ದೇಶಕಿ ಆರ್.ಸ್ನೇಹಲ್ ತಲೆದಂಡವಾಯ್ತಾ ಅನ್ನೋ ಪ್ರಶ್ನೆ ಕಾಡ್ತಿದೆ. ಸದ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸ್ನೇಹಲ್ ದಿಢೀರ್ ವರ್ಗಾವಣೆ ಮಾಡಲಾಗಿದೆ‌.

ಪಿಯು ಕಾಲೇಜು ನಿರ್ದೇಶಕರ ಸ್ಥಾನಕ್ಕೆ ಬೀದರ್ ಡಿಸಿಯಾಗಿದ್ದ ರಾಮಚಂದ್ರನ್ ಅವರನ್ನು ನೂತನ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಹಿಜಾಬ್ ಹೋರಾಟ ತೀವ್ರ ಸ್ವರೂಪ ಪಡೆದರೂ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸದ ಕಾರಣ ಸ್ನೇಹಲ್ ಅವರನ್ನು ವರ್ಗಾವಣೆ ಮಾಡಿರುವ ಸಾಧ್ಯತೆ ಇದೆ‌‌ ಎನ್ನಲಾಗ್ತಿದೆ.

Edited By :
PublicNext

PublicNext

07/02/2022 05:18 pm

Cinque Terre

16.87 K

Cinque Terre

6

ಸಂಬಂಧಿತ ಸುದ್ದಿ