ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದ್ವಿತೀಯ ಪಿಯು ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಈ ಹಿಂದೆ ಫೆಬ್ರವರಿ 8 ರಂದು ಪ್ರಕಟಿಸಲಾಗಿತ್ತು.

ಆದರೆ, ಏ.21ರಂದು ನಡೆಯಬೇಕಿದ್ದ ಭಾಷಾ ವಿಷಯಗಳಲ್ಲಿ ಉರ್ದು ಮತ್ತು ಅರೇಬಿಕ್ ವಿಷಯಗಳನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿದ್ದು, ಒಂದೇ ವೇಳೆಯಲ್ಲಿ ಒಂದೇ ದಿನ ಎರಡು ವಿಷಯಗಳನ್ನು ಬರೆಯಲು ಸಾಧ್ಯವಾಗುವುದಿಲ್ಲ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರೇಬಿಕ್ ವಿಷಯದ ಪರೀಕ್ಷೆಯನ್ನು ಮಾತ್ರ ಏ.29ಕ್ಕೆ ನಿಗದಿಪಡಿಸಿ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.

Edited By :
PublicNext

PublicNext

12/02/2022 08:30 pm

Cinque Terre

20.39 K

Cinque Terre

0

ಸಂಬಂಧಿತ ಸುದ್ದಿ