ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಈಜಿಪುರ ಮೇಲ್ಸೇತುವೆ ನಿರ್ಮಾಣದ ಗುತ್ತಿಗೆದಾರರ ವಿರುದ್ಧ ಎಫ್‌ಐಆರ್ ದಾಖಲಿಸುವ ಬಗ್ಗೆ ಸರ್ಕಾರ ನಿರ್ಧಾರ - ಗೌರವ್ ಗುಪ್ತ

ಬೆಂಗಳೂರು: ಕೋರಮಂಗಲದ ಕೇಂದ್ರೀಯ ಸದನ ಮತ್ತು ಈಜಿಪುರ ನಡುವೆ ಸಂಪರ್ಕ ಕಲ್ಪಿಸುವ ಈಜಿಪುರ ಮೇಲ್ಸೇತುವೆ ನಿರ್ಮಾಣ ಕಾರ್ಯ ವಿಳಂಬದ ಹಿನ್ನೆಲೆಯಲ್ಲಿ, ಹೈಕೋರ್ಟ್ ನೀಡಿರುವ ಸೂಚನೆಯನ್ನ ಸರ್ಕಾರ ಪರಿಶೀಲನೆಗೆ ಮುಂದಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಸರ್ಕಾರದ ಮಟ್ಟದಲ್ಲಿ ಚರ್ಚೆಯಲ್ಲಿದ್ದು, ಹೈಕೋರ್ಟ್ ಗುತ್ತಿಗೆದಾರರ ವಿರುದ್ಧ ಎಫ್.ಐ.ಆರ್ ದಾಖಲಿಸುವ ಸೂಚನೆಯನ್ನು ಪರಿಶೀಲನೆ ನಡೆಸುತ್ತಿದೆ ಎಂದರು.

ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಎಫ್.ಐ.ಆರ್ ಹೂಡುವಂತೆ ಬಿಬಿಎಂಪಿ ಆದೇಶಿಸಿದೆ.

ಯೋಜನೆಯ ಟೆಂಡರ್ ರದ್ದು ಮಾಡಲು ಅನುಮತಿ ಕೋರಿ ಬೆಂಗಳೂರು ಮಹಾನಗರ ಪಾಲಿಕೆ ಸಲ್ಲಿಸಿರುವ ಮನವಿಯನ್ನು ಸರ್ಕಾರ ಒಂದು ವಾರದಲ್ಲಿ ಪರಿಗಣಿಸಿ ಗುತ್ತಿಗೆ ರದ್ದುಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.

ಕಾಮಗಾರಿ ಪೂರ್ಣಗೊಳಿಸಲು ವಿಳಂಬ ಮಾಡಿದ ಗುತ್ತಿಗೆದಾರ ಸಂಸ್ಥೆಗೆ 2 ಬಾರಿ ನೋಟಿಸ್ ನೀಡಲಾಗಿತ್ತು. ಕಾಲ ಮಿತಿಯೊಳಗೆ ಯೋಜನೆ ಪೂರ್ಣಗೊಳಿಸದಿದ್ದರೆ ಗುತ್ತಿಗೆ ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಆದರೆ ನೋಟಿಸ್‌ಗೆ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಗುತ್ತಿಗೆ ರದ್ದುಪಡಿಸಲು ಸರ್ಕಾರದ ಅನುಮತಿ ಕೋರಿ ಪತ್ರ ಬರೆಯಲಾಗಿದೆ ಎಂದು ಗೌರವ್ ಗುಪ್ತ ತಿಳಿಸಿದರು.

Edited By : Shivu K
PublicNext

PublicNext

19/02/2022 06:12 pm

Cinque Terre

35.15 K

Cinque Terre

0

ಸಂಬಂಧಿತ ಸುದ್ದಿ