ಬೆಂ.ದಕ್ಷಿಣ: ಕಂದಾಯ ಇಲಾಖೆಯ ಮಹತ್ವಕಾಂಕ್ಷೆ ಯೋಜನೆಯಡಿ ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಧೃಢೀಕರಣ ಪತ್ರಗಳನ್ನು ರಾಜ್ಯದ ಗ್ರಾಮಗಳ ರೈತ ಕುಟುಂಬಗಳಿಗೆ ಕಂದಾಯ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಮಾಡಿದೆ ಎಂದು ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ತಿಳಿಸಿದರು.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಜಿಗಣಿ ಹೋಬಳಿಯ ಸಕಲವಾರ ಗ್ರಾಮದಲ್ಲಿ ಇಂದು ನಡೆದಂತಹ ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಅವರು ಸುಮಾರು ಈ ಗ್ರಾಮದ 37 ಜನರಿಗೆ ಕಂದಾಯ ದಾಖಲೆಗಳನ್ನು ನೀಡಿ, ಗ್ರಾಮದ ಬಗೆಗಿನ ತಮ್ಮ ವಿಶೇಷ ಕಾಳಜಿಯನ್ನು ಹಂಚಿಕೊಂಡರು.
ಇದೇ ಮೊದಲ ಬಾರಿಗೆ ರಾಜ್ಯದ ಯಾವುದೇ ಪ್ರದೇಶದಲ್ಲಿರುವಂತಹ ಯಾರಾದರೂ ಪಹಣಿ ಇಲ್ಲದೆ ಇದ್ದರೂ ಜಮೀನು ಪಡೆದುಕೊಳ್ಳುಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕಂದಾಯ ಕಾಯ್ದೆಯಲ್ಲಿ ತಿದ್ದುಪಡಿ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವರಾದ ಅಶೋಕ್ ಅವರ ಶ್ರಮವೇ ಕಾರಣ ಎಂದರು.
Kshetra Samachara
12/03/2022 10:08 pm