ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೊಡ್ಡಬಳ್ಳಾಪುರ: ಜೋಡಿ ತಿಮ್ಮಸಂದ್ರ ಗ್ರಾಮದಲ್ಲಿ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ'; ಸಕಲ ಸಿದ್ಧತೆ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮ ಇಂದು ದೊಡ್ಡಬಳ್ಳಾಪುರ ತಾಲೂಕಿನ ಜೋಡಿ ತಿಮ್ಮಸಂದ್ರ ಗ್ರಾಮದಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ಮಾಡಲಾಗಿದೆ.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಕನಸವಾಡಿ ಗ್ರಾಪಂ ವ್ಯಾಪ್ತಿಯ ಜೋಡಿ ತಿಮ್ಮಸಂದ್ರ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸಮಸ್ಯೆ ಆಲಿಸಿ ಅರ್ಹರಿಗೆ ಸವಲತ್ತು ವಿತರಿಸಲಿದ್ದಾರೆ ಹಾಗೂ ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ದೇವನಹಳ್ಳಿ ತಾಲ್ಲೂಕಿನಲ್ಲಿ ತಹಶೀಲ್ದಾರ್ ಶಿವರಾಜ್ ವಿಜಯಪುರ ಹೋಬಳಿಯ ಹಾರೋಹಳ್ಳಿ ಗ್ರಾಪಂ ವ್ಯಾಪ್ತಿಯ ಹಾರೋಹಳ್ಳಿ ಗ್ರಾಮದಲ್ಲಿ, ಹೊಸಕೋಟೆ ತಾಲ್ಲೂಕಿನಲ್ಲಿ ತಹಶೀಲ್ದಾರ್ ಮಹೇಶ್ ಕುಮಾರ್ ಕೆ.ಎಂ. ಕಸಬಾ ಹೋಬಳಿಯ ಕುಂಬಳಹಳ್ಳಿ ಗ್ರಾಪಂ ವ್ಯಾಪ್ತಿಯ ಕುಂಬಳಹಳ್ಳಿ ಗ್ರಾಮದಲ್ಲಿ ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ ತಹಶೀಲ್ದಾರ್ ಮಂಜುನಾಥ್ ಕಸಬಾ ಹೋಬಳಿಯ ಬೂದಿಹಾಳ ಗ್ರಾಪಂ ವ್ಯಾಪ್ತಿಯ ಮಂಡಿಗೆರೆ ಗ್ರಾಮದಲ್ಲಿ ಆಯಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸಮಸ್ಯೆ ಆಲಿಸುವ ಜೊತೆಯಲ್ಲಿ ಸವಲತ್ತು ವಿತರಿಸಿ, ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

Edited By :
Kshetra Samachara

Kshetra Samachara

19/03/2022 12:15 pm

Cinque Terre

1.96 K

Cinque Terre

0

ಸಂಬಂಧಿತ ಸುದ್ದಿ