ಬೆಂಗಳೂರು: ಧಾರ್ಮಿಕ ಕೇಂದ್ರ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ನಿಷೇಧಿತ ಅವಧಿಯಲ್ಲಿ ಧ್ವನಿವರ್ಧಕ ಬಳಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.
ಹೈಕೋರ್ಟ್ ಆದೇಶ ಪಾಲನೆ ಮಾಡುವುದು ಎಲ್ಲರ ಕರ್ತವ್ಯ. ಮುಂಜಾನೆ ಹಾಗೂ ರಾತ್ರಿ ಅವಧಿಯಲ್ಲಿ ಮೈಕ್ ಬಳಸುತ್ತಿರವವರಿಗೆ 200ಕ್ಕಿಂತ ಹೆಚ್ಚು ಮಂದಿಗೆ ನೊಟೀಸ್ ನೀಡಲಾಗಿದೆ. ಆದಾಗ್ಯೂ ಕಾನೂನು ಉಲ್ಲಂಘಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಈಗಾಗಲೇ 6 ತಿಂಗಳ ಹಿಂದೆ ಹೈಕೋರ್ಟ್ ಆದೇಶಿಸಿದೆ. ಹೈಕೋರ್ಟ್ ನಿರ್ದೇಶನದಂತೆ ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಮಸೀದಿ, ಮಂದಿರ ಎಲ್ಲಾ ಸೇರಿದಂತೆ ನೋಟೀಸ್ ನೀಡಲಾಗಿದೆ. ಮಸೀದಿ ಮಂದಿರ ಅಲ್ಲ, ಕಾರ್ಖಾನೆಗಳಿಗೆ, ಪಬ್‌ಗಳಿಗೆ ಕೂಡ ನೋಟೀಸ್ ನೀಡಿದ್ದಾರೆ. ಅಲ್ಲದೆ ಧರ್ಮ ಮುಖಂಡರ ಜೊತೆ ಸಭೆ ನಡೆಸಲಾಗಿದೆ. ಅವರಿಗೂ ಮಾರ್ಗದರ್ಶನ ನೀಡಲಾಗಿದೆ. ಅದರಂತೆ ಧರ್ಮ ಗುರುಗಳು ನಡೆದುಕೊಂಡಿದ್ದಾರೆ.
ಹೈಕೋರ್ಟ್ ಆದೇಶ ಪ್ರಕಾರ ಎಲ್ಲರೂ ಪಾಲನೆ ಮಾಡಲೇಬೇಕು. ಉಲ್ಲಂಘನೆ ಮಾಡಿದವರಿಗೆ ಶಿಕ್ಷೆ ಆಗುತ್ತದೆ. ನಿಯಮ ಉಲ್ಲಂಘಿಸಿದ ಧಾರ್ಮಿಕ ಕೇಂದ್ರಗಳಲ್ಲಿ ಈಗಾಗಲೇ ಮೈಕ್ ಗಳನ್ನು ಜಪ್ತಿ ಮಾಡಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಬಾಲ ಬಿಚ್ಚಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
Kshetra Samachara
05/04/2022 02:28 pm