ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ಅವಧಿಯಲ್ಲಿ ವಜಾಗೊಂಡಿದ್ದ ನೌಕರರ ಮರು ನೇಮಕಕ್ಕೆ ಬಿಎಂಟಿಸಿ ಮುಂದಾಗಿದೆ. ಇಂದು 62 ಖಾಯಂ ಸಿಬ್ಬಂದಿಗೆ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಮರು ನೇಮಕಾತಿ ಆದೇಶ ಪತ್ರ ನೀಡಿದರು.
ವೇತನ ಪರಿಷ್ಕರಣೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು 2021ರ ಏಪ್ರಿಲ್ 7ರಿಂದ 20ರವರೆಗೆ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು. ಬಳಿಕ ಮುಷ್ಕರಕ್ಕೆ ಪ್ರಚೋದನೆ ನೀಡಿದ , ಇತರರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಖಾಯಂ ಪರೀಕ್ಷಾರ್ಥಿ ಹಾಗೂ ತರಬೇತಿ ಸಿಬ್ಬಂದಿ ಸೇರಿ 1,353 ನೌಕರರ ಸೇವೆಯಿಂದ ವಜಾಗೊಳಿಸಲಾಗಿತ್ತು. ಈ ಪೈಕಿ ಇದುವರೆಗೂ 450 ಮಂದಿ ನೌಕರರನ್ನು ನೇಮಕ ಮಾಡಿಕೊಳ್ಳಲಾಗಿದೆ. ಕಾರ್ಮಿಕ ಆಯುಕ್ತರ ಬಳಿ ದಾಖಲಾಗಿದ್ದ ಎಲ್ಲ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಬಗೆಹರಿಸಲಾಗುತ್ತಿದೆ.
PublicNext
11/04/2022 05:36 pm