ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

110 ಹಳ್ಳಿಗಳ ರಸ್ತೆ ಪುನಶ್ಚೇತನಗೊಳಿಸುವ ಸಂಬಂಧ ಪರಿಶೀಲನಾ ಸಭೆ: ಮುಖ್ಯ ಆಯುಕ್ತರು.

ಬೆಂಗಳೂರು- ನಗರದ 110 ಹಳ್ಳಿಗಳ ರಸ್ತೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಲಮಂಡಳಿಯಿಂದ ನೀರಿನ ಪೈಪ್ ಲೈನ್ ಹಾಗೂ ಒಳಚರಂಡಿ ಕಾಮಗಾರಿ ಪೂರ್ಣಗೊಂಡಿರುವ ರಸ್ತೆಗಳ ಪುನಶ್ಚೇತನ ಕಾರ್ಯ ತ್ವರಿತಗತಿಯಲ್ಲಿ ಆಗಬೇಕಿದೆ. ಈ ಪೈಕಿ ರಸ್ತೆ ದುರಸ್ತಿಗೆ ವಿಳಂಬ ತೋರಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮುಖ್ಯ ಆಯುಕ್ತರಾದ ಗೌರವ್ ಗುಪ್ತ ರವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

110 ಹಳ್ಳಿಗಳ ರಸ್ತೆ ಪುನಶ್ಚೇತನ ಕಾರ್ಯಕ್ಕೆ ಸಂಬಂಧಿಸಿದಂತೆ ಇಂದು ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ 110 ಹಳ್ಳಿಗಳ ರಸ್ತೆ ಪುನಶ್ಚೇತನ ಕಾರ್ಯಕ್ಕಾಗಿ ರಾಜ್ಯ ಸರ್ಕಾರದಿಂದ 1,078 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಮೇ ಅಂತ್ಯದೊಳಗೆ ರಸ್ತೆ ಪುನಶ್ಚೇತನ ಕಾರ್ಯವನ್ನು ಪುರ್ಣಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವಾಗುವಂತೆ ಮಾಡಿಕೊಡಬೇಕು. ಆದ್ದರಿಂದ ಎಲ್ಲಾ ಅಧಿಕಾರಿಗಳು ರಸ್ತೆಗಳ ಪುನಶ್ಚೇತನ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಮುಂದಾಗಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

110 ಹಳ್ಳಿಗಳ ಪೈಕಿ 794.98 ಕಿ.ಮೀ ಉದ್ದದ ರಸ್ತೆಯನ್ನು 74 ಪ್ಯಾಕೇಜ್ ಗಳಲ್ಲಿ ರಸ್ತೆ ಪುನಶ್ಚೇತನ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಅದರಲ್ಲಿ 289.69 ಕಿ.ಮೀ ರಸ್ತೆ ಪುನಶ್ಚೇತನ ಕಾರ್ಯ ಪೂರ್ಣಗೊಂಡಿದ್ದು, 505.29 ಕಿ.ಮೀ ರಸ್ತೆ ಪುನಶ್ಚೇತನ ಕಾರ್ಯಆಗಬೇಕಿದ್ದು, ಮೇ ಅಂತ್ಯದೊಳಗೆ ಎಲ್ಲಾ ರಸ್ತೆಗಳ ಪುನಶ್ಚೇತನ ಕಾರ್ಯ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

Edited By : PublicNext Desk
Kshetra Samachara

Kshetra Samachara

20/04/2022 10:51 pm

Cinque Terre

616

Cinque Terre

0

ಸಂಬಂಧಿತ ಸುದ್ದಿ