ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಿವೃತ್ತಿ ನಂತರವೂ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರ ವಜಾ: ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್

ಆನೇಕಲ್ ತಾಲ್ಲೂಕು ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಫೀಕ್ ಅಹಮದ್ ಸರ್ಕಾರಿ ಡಿ ನೌಕರ ಕೆಲಸದಿಂದ ವಜಾ ಮಾಡಲಾಗಿದೆ. ಇದು ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್.

ಹೌದು.. ಆನೇಕಲ್ ತಾಲೂಕು ಕಚೇರಿಯಲ್ಲಿ ರಫೀಕ್ ಅಹಮದ್ ಸರ್ಕಾರಿ ಡಿ ಗ್ರುಪ್ ನೌಕರ ಕೆಲಸದಿಂದ ನಿವೃತ್ತಿ ಹೊಂದಿ ಒಂದು ವರ್ಷ ಕಳೆದರೂ ಕೂಡ ಗುತ್ತಿಗೆ ಆಧಾರದ ಮೇಲೆ ಮತ್ತೆ ಅದೇ ಕೆಲಸ ಮುಂದುವರಿಸಿದ್ದರು. ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ವಿಸ್ತಾರವಾಗಿ ಸುದ್ದಿ ಬಿತ್ತರ ಮಾಡಿತ್ತು. ವರದಿ ನೋಡಿ ಎಚ್ಚೆತ್ತ ತಾಲೂಕು ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀನಾರಾಯಣ ಸ್ವಾಮಿ ರಫೀಕ್ ಅಹಮದ್ ಅವರನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಇನ್ನು ಆನೇಕಲ್ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಿಂದ ಮಾಹಿತಿ ಲಭ್ಯವಾಗಿದೆ.

Edited By : Nagaraj Tulugeri
Kshetra Samachara

Kshetra Samachara

29/04/2022 09:22 pm

Cinque Terre

5.08 K

Cinque Terre

0

ಸಂಬಂಧಿತ ಸುದ್ದಿ