ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 2500 ಕಟ್ಟಡಗಳನ್ನು ಸಕ್ರಮಗೊಳಿಸಿ 'ಸುಪ್ರೀಂ' ಆದೇಶ ; ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಲು ಬಿಡಿಎ ಸಜ್ಜು

ಬೆಂಗಳೂರು : ಅಭಿವೃದ್ಧಿ ಪ್ರಾಧಿಕಾರ ಉದ್ದೇಶಿತ ಡಾ.ಶಿವರಾಮ ಕಾರಂತ್ ಬಡಾವಣೆಯ ಸುಮಾರು 2500 ಕಟ್ಟಡಗಳನ್ನು ಸರ್ವೋಚ್ಛ ನ್ಯಾಯಾಲಯ ಸಕ್ರಮಗೊಳಿಸಿ ಆದೇಶ ಹೊರಡಿಸಿದೆ. ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಲು ಬಿಡಿಎ ಸಜ್ಜಾಗಿದೆ ಎಂದು ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ನೇತೃತ್ವದ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ಸಲ್ಲಿಸಿದ ವರದಿಯ ಆಧಾರದ ಮೇಲೆ 2018ಕ್ಕಿಂತ ಮುಂಚೆ ಸ್ಥಳೀಯ ಪ್ರಾಧಿಕಾರದ ಅನುಮತಿ ಪಡೆದು ಕಟ್ಟಿದ ಕಟ್ಟಡಗಳ ಮಾಲೀಕರು ಸಲ್ಲಿಸಿದ ದಾಖಲೆಗಳ ಮೇಲೆ ಸರ್ವೋಚ್ಛ ನ್ಯಾಯಾಲಯ ಸಕ್ರಮಗೊಳಿಸಿ ಆದೇಶಿಸಿದೆ ಎಂದು ಮಾಹಿತಿ ನೀಡಿದೆ.

ನ್ಯಾಯಾಲಯದ ಆದೇಶದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕ್ರಮಕೈಗೊಂಡಿದ್ದು, ಕಟ್ಟಡಗಳ ಮಾಲೀಕರಿಗೆ ಸಕ್ರಮ ಪ್ರಮಾಣ ಪತ್ರವನ್ನು ಮೇ 13ರಿಂದ ಡಾ.ಶಿವರಾಮ ಕಾರಂತ ಬಡಾವಣೆ ವ್ಯಾಪ್ತಿಯ ಮೇಡಿ ಅಗ್ರಹಾರದ ಉರ್ದು ಪ್ರಾಥಮಿಕ ಶಾಲೆಯಲ್ಲಿ ನೀಡಲಾಗುವುದು ಎಂದಿದೆ.

ಪ್ರಮಾಣ ಪತ್ರ ಪಡೆಯುವ ವಿಧಾನ : ಫಲಾನುಭವಿಗಳು ಸಕ್ರಮ ಪ್ರಮಾಣ ಪತ್ರವನ್ನು ಪಡೆಯಲು ತಮ್ಮೊಂದಿಗೆ ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ಆಧಾರ್‌ಕಾರ್ಡ್, ಸಮಿತಿಯಿಂದ ಸ್ವೀಕರಿಸಿರುವ ಎಸ್‌ಎಂಎಸ್, ಸಮಿತಿ ನೀಡಿರುವ ರಸೀದಿಯನ್ನು ಸಲ್ಲಿಸಬೇಕು ಎಂದು ಮಾಹಿತಿ ನೀಡಿದೆ.

ಎಸ್‌ಎಂಎಸ್ ಮೂಲಕ ಮಾಹಿತಿ : ಎಲ್ಲಾ ಫಲಾನುಭವಿಗಳು ಮೇಡಿ ಅಗ್ರಹಾರದ ಉರ್ದು ಪ್ರಾಥಮಿಕ ಶಾಲೆಯಲ್ಲಿ ಹಾಜರಾಗಲು ಹಾಗೂ ನಿಗದಿತ ದಿನಾಂಕ ಮತ್ತು ಸಮಯದ ಕುರಿತು ಎಸ್‌ಎಂಎಸ್ ಅನ್ನು ಕಳುಹಿಸಲಾಗುವುದು ಎಂದು ನ್ಯಾಯಮೂರ್ತಿ ಎ ವಿ ಚಂದ್ರಶೇಖರ್ ಸಮಿತಿ ಪ್ರಕಟಣೆಯ ಮೂಲಕ ಮಾಹಿತಿ ನೀಡಿದೆ.

Edited By : PublicNext Desk
Kshetra Samachara

Kshetra Samachara

07/05/2022 03:47 pm

Cinque Terre

554

Cinque Terre

0

ಸಂಬಂಧಿತ ಸುದ್ದಿ