ಬೆಂಗಳೂರು: ಶೀಘ್ರದಲ್ಲಿಯೇ ಬಿಬಿಎಂಪಿ ಚುನಾವಣೆ ನಡೆಯಲಿದೆ. ಚುನಾವಣೆ ನಡೆಸಲು ಪಾಲಿಕೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ಬಿಬಿಎಂಪಿ ಚುನಾವಣೆ ಕುರಿತು ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ತುಷಾರ್ ಗಿರಿನಾಥ್ ಚುನಾವಣಾ ಆಯೋಗ ಚುನಾವಣೆ ಘೋಷಿಸಿದರೆ ಎಲ್ಲ ರೀತಿಯ ಸಿದ್ದತೆಗಳನ್ನು ನಾವು ಮಾಡಿಕೊಳ್ಳುತ್ತೇವೆ ಎಂದರು. ಡಿ ಲಿಮಿಟೇಶನ್ ಮಾಡಲೇಬಾರದು ಎಂದು ನ್ಯಾಯಪೀಠ ಹೇಳಿಲ್ಲ. ಈ ಕುರಿತು ವಾರ್ಡ್ ವಿಂಗಡಣಾ ಸಮಿತಿ ಸರ್ಕಾರ ಮತ್ತು ಆಯೋಗದ ಜೊತೆ ಮಾಡಿ ನಿರ್ಧಾರ ಕೈಗೊಳ್ಳುತ್ತದೆ. ಯಾವುದೇ ಸಮಸ್ಯೆ ಆಗದಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
Kshetra Samachara
10/05/2022 08:13 pm