ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಾ. ಶಿವರಾಮ ಕಾರಂತ್ ಬಡಾವಣೆ: ಸಕ್ರಮ ಪ್ರಮಾಣ ಪತ್ರ ವಿತರಣೆ

ಬೆಂಗಳೂರು: ಬೆಂಗಳೂರು ಅಬಿವೃದ್ಧಿ ಪ್ರಾಧಿಕಾರ ಉದ್ದೇಶಿತ ಡಾ. ಶಿವರಾಮ ಕಾರಂತ್ ಬಡಾವಣೆ ವ್ಯಾಪ್ತಿಯ ನಿವಾಸಿಗಳ ಕಟ್ಟಡಗಳ ಸಕ್ರಮ ಕುರಿತು ಸರ್ವೋಚ್ಛ ನ್ಯಾಯಾಲಯ ರಚಿಸಿರುವ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿ ಸಲ್ಲಿಸಿದ್ದ ವರದಿ ಆಧರಿಸಿ ಸರ್ವೋಚ್ಛ ನ್ಯಾಯಾಲಯ ಸಕ್ರಮಗೊಳಿಸಿ ಆದೇಶಿಸಿರುವ ಕಟ್ಟಡಗಳ ಮಾಲಿಕರಿಗೆ ಇಂದು ಸಕ್ರಮ ಪ್ರಮಾಣಪತ್ರ ವಿತರಿಸಲಾಯಿತು.

ನ್ಯಾಯಾಲಯದ ಆದೇಶದಂತೆ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿಯ ನೇತೃತ್ವದಲ್ಲಿ ಬೆಂಗಳೂರು ಅಬಿವೃದ್ಧಿ ಪ್ರಾಧಿಕಾರದವತಿಯಿಂದ ಡಾ. ಶಿವರಾಮ ಕಾರಂತ್ ಬಡಾವಣೆ ವ್ಯಾಪ್ತಿಯ ಮೇಡಿ ಅಗ್ರಹಾರದ ಉರ್ದು ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಸಕ್ರಮ ಪ್ರಮಾಣಪತ್ರ ನೀಡಲಾಯಿತು.

2018ಕ್ಕಿಂತ ಮುಂಚಿತವಾಗಿ ಉದ್ದೇಶಿತ ಬಡಾವಣೆ ವ್ಯಾಪ್ತಿಯಲ್ಲಿ ಸ್ಥಳೀಯ ಪ್ರಾಧಿಕಾರಗಳ ಅನುಮತಿ ಪಡೆದು ಕಟ್ಟಿದ ಕಟ್ಟಡಗಳ ಮಾಲೀಕರು ಸಲ್ಲಿಸಿದ ದಾಖಲೆಗಳನ್ನು ಆಧರಿಸಿ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿ ಇಲ್ಲಿಯವರೆಗೆ 14 ವರದಿಗಳನ್ನು ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ್ದು ಅದರಲ್ಲಿ ಈವರೆಗೆ ಒಟ್ಟು 2,825 ಕಟ್ಟಡಗಳನ್ನು ಸಕ್ರಮಗೊಳಿಸಿ ಆದೇಶಿಸಿದೆ.

ಸಮಿತಿಯು ಸ್ಥಳೀಯರಿಂದ ಒಟ್ಟು ಸುಮಾರು 7,000 ಕಟ್ಟಡಗಳನ್ನು ಸಕ್ರಮಗೊಳಿಸಲು ಕೋರಿ ಅರ್ಜಿಗಳನ್ನು ಸ್ವೀಕರಿಸಿದ್ದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಹಾಗೂ ಸಂಪೂರ್ಣ ದಾಖಲೆಗಳನ್ನು ಸಲ್ಲಿಸಿದವರಿಗೆ ಹಂತ-ಹಂತವಾಗಿ ಮಾನ್ಯ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿ ಆದೇಶ ಪಡೆಯಲಾಗುತ್ತಿದೆ.

Edited By : PublicNext Desk
Kshetra Samachara

Kshetra Samachara

13/05/2022 07:05 pm

Cinque Terre

1.25 K

Cinque Terre

0

ಸಂಬಂಧಿತ ಸುದ್ದಿ