ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಂಗಾರು ಆರಂಭ ಹಿನ್ನಲೆ ಬಿಬಿಎಂಪಿಯಲ್ಲಿ ವರ್ಚ್ಯುಲ್ ಮೀಟಿಂಗ್

ಬೆಂಗಳೂರು - ನಗರದಲ್ಲಿ ಮಳೆಗಾಲದ ವೇಳೆ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ದಳ(ಎಸ್.ಡಿ.ಆರ್.ಎಫ್) ನಡುವೆ ಇಂದು ಮಹತ್ವದ ಸಭೆ ಜರುಗಿತು.ಬಿಬಿಎಂಪಿ ‌ಕೇಂದ್ರ ಕಚೇರಿಯಲ್ಲಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ನೇತೃತ್ವದಲ್ಲಿ ವಿವಿಧ ಇಲಾಖೆ ಯ ಜತೆ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನಮ್ಮಲ್ಲಿ ಸಾಕಷ್ಟು ಸಂಪನ್ಮೂಲಗಳಿದ್ದು, ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ನಾಗರಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ತ್ವರಿತಗತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

ಮಳೆಗಾಲದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಯ ಸಿಬ್ಬಂದಿಯ ಹೆಸರು, ಮೊಬೈಲ್ ಸಂಖ್ಯೆಯ ಮಾಹಿತಿ ಕೊಡಬೇಕು. ಇದರಿಂದ ನಾಗರಿಕರಿಗೆ ಹೆಚ್ಚು ಅನುಕೂಲವಾಗಲಿದೆ. ಅಲ್ಲದೆ ಮಳೆಗಾಲದ ವೇಳೆ ಎಲ್ಲಾ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಮಳೆಗಾಲದಲ್ಲಿ ಜಲಾವೃತವಾಗುವುದು, ರಸ್ತೆಗಳಲ್ಲಿ ನೀರು ನಿಲ್ಲುವುದು, ಮರಗಳು/ಮರದ ರೆಂಬೆ-ಕೊಂಬೆಗಳು ಧರೆಗುರುಳಿರುವ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಬಗ್ಗೆ ನಾಗರಿಕರು ದೂರುಗಳು ನೀಡಿದ ಕೂಡಲೆ ತ್ವರಿತವಾಗಿ ಸ್ಪಂದಿಸಬೇಕು ಎಂದು ತಿಳಿಸಿದರು.

ಪಾಲಿಕೆಯ ಅರಣ್ಯ ವಿಭಾಗದಿಂದ ಮರಗಳನ್ನು ತೆರವುಗೊಳಿಸಲು 21 ತಂಡಗಳು ಕಾರ್ಯನಿರ್ವಹಿಸುತ್ತಿದ್ದು, ಹಗಲಿನಲ್ಲಿ 18 ತಂಡಗಳು, ರಾತ್ರಿ ವೇಳೆ 3 ತಂಡಗಳು ಕಾರ್ಯನಿರ್ವಹಿಸುತ್ತಿವೆ. ಈ ಪೈಕಿ ರಾತ್ರಿ ವೇಳೆಯೂ ಹೆಚ್ಚಿನ ತಂಡಗಳು ಕಾರ್ಯ ನಿರ್ವಹಿಸಬೇಕೆಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚನೆ ನೀಡಿದರು.

Edited By : Nirmala Aralikatti
Kshetra Samachara

Kshetra Samachara

17/05/2022 08:00 pm

Cinque Terre

4.23 K

Cinque Terre

1

ಸಂಬಂಧಿತ ಸುದ್ದಿ