ಬೆಂಗಳೂರು: ರಾಜಧಾನಿ ಬೆಂಗಳೂ ರಿನಲ್ಲಿ ಮತ್ತೆ ಪಿಂಕ್ ನಾರಿಯರ ಧರಣಿ ಆರಂಭವಾಗಿದೆ. ನಗರದ ಪ್ರೀಡಂ ಪಾರ್ಕ್ ನಲ್ಲಿ ಇಂದಿನಿಂದ ವಿವಿಧ ಬೇಡಿಕೆಗಳನ್ನ ಈಡೇರಿ ಸುವಂತೆ ಪ್ರತಿಭಟನೆ ನಡೆಯುತ್ತಿದೆ.
ಹೌದು..ಎಐಯುಟಿಯುಸಿ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆ ಯರು ಧರಣಿ ಆರಂಭಿಸಿದೆ.ಕೇಂದ್ರ ರಾಜ್ಯ ಸರ್ಕಾರಕ್ಕೆ ಪ್ರತಿಭಟನೆ ಬಿಸಿ ಮುಟ್ಟಿಸಿದೆ. 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತೆಯರು, ಕೊರೊನಾ ಸಂದರ್ಭದಲ್ಲಿ ದಿನದ 24 ಗಂಟೆ ಸೇವೆ ಸಲ್ಲಿಸಿದ್ದಾರೆ. ಆದರೆ ಕೆಲಸಕ್ಕೆ ತಕ್ಕ ವೇತನ ನೀಡುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ 3 ಸಾವಿರ, ರಾಜ್ಯ ಸರ್ಕಾರ 5 ಸಾವಿರ ಎನ್ನುತ್ತಿದೆ. ಕೇಂದ್ರ ಸರ್ಕಾರದಿಂದ ಕೇವಲ 650 ರೂ. ಮಾತ್ರ ಕೈಗೆ ಸಿಗುತ್ತಿದೆ.
ಪ್ರೋತ್ಸಾಹ ಧನ, ಗೌರವಧನ ಒಗ್ಗೂಡಿಸಿ ಮಾಸಿಕ ವೇತನ ನೀಡಬೇಕು. ಆರ್ಸಿಹೆಚ್ ಪೋರ್ಟಲ್ ಡೇಟಾ ಎಂಟ್ರಿ ಸಮಸ್ಯೆ ಬಗೆಹರಿಸಬೇಕು. ಆಶಾ ಕಾರ್ಯಕರ್ತೆಯರಿಗೆ ಆಗುತ್ತಿರುವ ನಷ್ಟ ತುಂಬಿಕೊಡಬೇಕು. ಆರೋಗ್ಯ ಮತ್ತು ನಿವೃತ್ತ ಪರಿಹಾರ ಸೇರಿದಂತೆ ಹಲವು ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಧರಣಿ ನಡೆಯುತ್ತದೆ.
ಕಳೆದ ಬಾರಿಯೂ ಐವತ್ತು ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಬೆಂಗಳೂರಿಗೆ ಆಗಮಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಗದರಲ್ಲಿ ಭಾರಿ ಟ್ರಾಫಿಕ್ ಜಾಮ್ ಆಗಿತ್ತು. ಈ ಬಾರಿ ಒಂದು ಲಕ್ಷ ಆಶಾ ಕಾರ್ಯಕರ್ತೆಯರು ಬೆಂಗಳೂರಿಗೆ ಬರಬೇಕು ಎಂದು ಎಐಯುಟಿಯುಸಿ ಸಂಘಟನೆ ಕರೆ ನೀಡಿದೆ. ಹೀಗಾಗಿ ಎಲ್ಲಾ ಜಿಲ್ಲೆಗಳಿಂದ ಕಾರ್ಯಕರ್ತೆಯರು ಬೆಂಗಳೂರಿಗೆ ದಾಂಗುಡಿ ಇಡುತ್ತಿದ್ದಾರೆ.
ಮಾಜಿ ಲೋಕಾಯುಕ್ತ ನಿವೃತ್ತ ನ್ಯಾ ಸಂತೋಷ್ ಹೆಗ್ಡೆ ಹಾಗೂ ಸಾಮಾಜಿಕ ಹೋರಾಟಗಾರ ಎಸ್ ಆರ್ ಹಿರೇಮಠ ಕೂಡಾ ಧರಣಿಯಲ್ಲಿ ಭಾಗಿಯಾಗಿದ್ದರು.
Kshetra Samachara
17/05/2022 08:21 pm