ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮತ್ತೆ ಪ್ರತಿಭಟನೆಗೆ ಮುಂದಾದ ಆಶಾ ಕಾರ್ಯಕರ್ತೆಯರು

ಬೆಂಗಳೂರು: ವಿವಿದ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಾಳೆ (ಬುಧವಾರ)ದಿಂದ ಪ್ರತಿಭಟನೆ ನಡೆಸಲಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯದ 15 ಸಾವಿರಕ್ಕೂ ಹೆಚ್ಚಿನ ಆಶಾ ಕಾರ್ಯಕರ್ತೆಯರು ಧರಣಿಯಲ್ಲಿ ಭಾಗಿಯಾಗಲಿದ್ದಾರೆ. ಕಳೆದ ಹದಿನೈದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪ್ರೊತ್ಸಾಹ ಧನ ಹೆಚ್ಚಾಗಿಲ್ಲ. ಕೊವೀಡ್ ಸಮಯದಲ್ಲಿ ವಾರಿಯರ್ಸ್ ಆಗಿ ದಿನಂಪೂರ್ತಿ ಕಾರ್ಯನಿರ್ವಹಿಸಿದಿದ್ದರೂ ಸರ್ಕಾರದಿಂದ ತಕ್ಕನಾದ ಸಂಬಳ ದೊರೆಯಲಿಲ್ಲ. ಗೌರವ ಧನವನ್ನು 3 ಸಾವಿರ ರೂ. ನೀಡುವುದಾಗಿ ಕೇಂದ್ರ ಸರ್ಕಾರ ಒಪ್ಪಿಕೊಂಡ್ರು 650 ರೂ. ನೀಡುತ್ತಿದೆ. ಆರ್ ಸಿಹೆಚ್ ಪೋರ್ಟಲ್ ಡೇಟಾ ಎಂಟ್ರಿ ಸಮಸ್ಯೆ ಪರಿಹರಿಸಬೇಕು. ಹೀಗೆ ಹಲವು ಬೇಡಿಕೆ ಮುಂದಿಟ್ಟುಕೊಂಡು ನಾಳೆ ಬೆಂಗಳೂರಲ್ಲಿ ಆಶಾ ಕಾರ್ಯಕರ್ತೆಯರು ಧರಣಿ ನಡೆಸಲಿದ್ದಾರೆ.

Edited By : Vijay Kumar
PublicNext

PublicNext

17/05/2022 10:45 pm

Cinque Terre

22.68 K

Cinque Terre

0

ಸಂಬಂಧಿತ ಸುದ್ದಿ