ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಆನೇಕಲ್‌ನಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಯಶಸ್ವಿ

ಬೆಂಗಳೂರು: ಜನಸಾಮಾನ್ಯರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ' ಎಂಬ ಸರ್ಕಾರಿ ಕಾರ್ಯಕ್ರಮವನ್ನು ಸರ್ಕಾರ ಕೈಗೊಂಡಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮ ಪಂಚಾಯತಿಯಲ್ಲಿ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಇನ್ನು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸ್ಮಶಾನ, ಕುಡಿಯುವ ನೀರು, ಮೂಲಭೂತ ಸಮಸ್ಯೆ, ಪೋಡಿ ಜಮೀನ್ ತಕರಾರು ಸೇರಿದಂತೆ ನಾನಾ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.

ಇನ್ನು ಗ್ರಾಮ ವಾಸ್ತವ್ಯದ ಮೂಲ ಉದ್ದೇಶ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವುದು. ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಮಸ್ಯೆಗಳ ಪರಿಹಾರವನ್ನು ಸ್ಥಳದಲ್ಲೇ ಬಗೆಹರಿಸಲಾಯಿತು. ಇನ್ನು ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜೆ. ಮಂಜುನಾಥ್ ತಹಶಿಲ್ದಾರ್ ದಿನೇಶ್ ಇಲಾಖಾಧಿಕಾರಿಗಳು ಭಾಗಿಯಾಗಿದ್ದರು.

-ಹರೀಶ್ ಗೌತಮನಂದ, ಪಬ್ಲಿಕ್ ನೆಕ್ಸ್ಟ್, ಆನೇಕಲ್ ಬೆಂಗಳೂರು

Edited By : Shivu K
Kshetra Samachara

Kshetra Samachara

27/05/2022 10:50 pm

Cinque Terre

40.68 K

Cinque Terre

0

ಸಂಬಂಧಿತ ಸುದ್ದಿ