ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ವಿವಿಧ ಇಲಾಖೆಯ ಜೊತೆ ಸಮನ್ವಯತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರತಿ ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕಡ್ಡಾಯವಾಗಿ ಸಭೆ ನಡೆಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಈ ಸಂಬಂಧ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರ ನೇತೃತ್ವ ದಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಇಂದು ಸಭೆ ನಡೆಯಿತು. ಇಂದು ನಡೆದ ಸಭೆಯಲ್ಲಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್, ನಗರ ಪೋಲಿಸ್ ಆಯುಕ್ತ ಪ್ರತಾಪ್ ರೆಡ್ಡಿ, ಜಲಮಂಡಳಿ ಅಧ್ಯಕ್ಷ ಜಯರಾಮ್, ಬಿ.ಎಂ.ಆರ್.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರು ಅಂಜುಂ ಪರ್ವೇಜ್, ಬಿಡಿಎ ಆಯುಕ್ತ ರಾಜೇಶ್ ಗೌಡ, ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕರು ಅನ್ಬು ಕುಮಾರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ, ಸಂಚಾರಿ ಪೋಲಿಸ್ ಜಂಟಿ ಆಯುಕ್ತ ರವಿಕಾಂತೆ ಗೌಡ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರು ರಾಜೇಂದ್ರ ಚೋಳನ್, ಬಿಎಂಟಿಸಿ ನಿರ್ದೇಶಕ ಸೂರ್ಯ ಸೇನ್, ಪಾಲಿಕೆಯ ವಿಶೇಷ ಆಯುಕ್ತರುಗಳು ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭ ಸಂಚಾರ ದಟ್ಟಣೆ ನಿವಾರಣೆ, ರಸ್ತೆ ಗುಂಡಿಗಳ ಕಾಮಗಾರಿ ಸೇರಿದಂತೆ ವಿವಿಧ ಇಲಾಖೆಯ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಯಿತು.
PublicNext
27/06/2022 01:13 pm