ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬೆಂಗಳೂರು ವಿವಿಧ ಇಲಾಖೆಯ ನೈಟ್ ರೌಂಡ್ಸ್

ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ನಗರದ ವಾಹನ ಸಂಚಾರ ದಟ್ಟಣೆ ನಿವಾರಣೆಗೆ ತತ್‌ಕ್ಷಣ ಮತ್ತು ದೀರ್ಘಕಾಲಿಕ ಪರಿಹಾರ ಕೈಗೊಳ್ಳುವ ಉದ್ದೇಶದಿಂದ ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಇದೇ ಮೊದಲ ಬಾರಿಗೆ ವಿವಿಧ ಇಲಾಖೆಗಳ ಮುಖ್ಯಸ್ಥರೊಂದಿಗೆ ತಡರಾತ್ರಿವರೆಗೆ ನಗರ ಪ್ರದಕ್ಷಿಣೆ ಮಾಡಿ ಟ್ರಾಫಿಕ್‌ ಸಮಸ್ಯೆ ಕುರಿತು ಪರಿಶೀಲನೆ ನಡೆಸಿದರು.

ಮಂಗಳವಾರ ರಾತ್ರಿ 10.30ರ ಸುಮಾರಿಗೆ ಬಿಬಿಎಂಪಿ ಕೇಂದ್ರ ಕಚೇರಿಯಿಂದ ನಗರ ಪ್ರದಕ್ಷಿಣೆ ಆರಂಭಗೊಂಡಿತು. ಬಿಬಿಎಂಪಿ ವಾಹನ ಮತ್ತು ಬಿಎಂಟಿಸಿ ವಜ್ರ ಬಸ್‌ನಲ್ಲಿ ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ಸಿಂಗ್‌, ಬಿಡಿಎ ಆಯುಕ್ತ ರಾಜೇಶ್‌ಗೌಡ, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್‌ ಸೇರಿದಂತೆ ಎಲ್ಲ ಇಲಾಖೆ ಅಧಿಕಾರಿಗಳು ನಗರ ಪ್ರದಕ್ಷಿಣೆಗೆ ತೆರಳಿದರು.

ವಿವಿಧ ಇಲಾಖೆಗಳ ಮುಖ್ಯಸ್ಥರನ್ನೊಳಗೊಂಡ ತಂಡವು ಮೊದಲಿಗೆ ಗೊರಗುಂಟೆಪಾಳ್ಯ ಜಂಕ್ಷನ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ಸಂದರ್ಭದಲ್ಲಿ ತುಷಾರ್‌ ಗಿರಿನಾಥ್‌ ಅವರು, ಅಲ್ಪಾವಧಿ ಯೋಜನೆಯಲ್ಲಿ ರಸ್ತೆ ಪುನಶ್ಚೇತನ ಕಾರ್ಯಕೈಗೊಳ್ಳಲು ರಸ್ತೆಯನ್ನು ಮಿಲ್ಲಿಂಗ್‌ ಮಾಡಿ ರಾತ್ರಿ 11ರ ನಂತರ ಗುಣಮಟ್ಟಕಾಪಾಡಿಕೊಂಡು ಕೆಲಸ ಮಾಡಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಮಿಸಿರುವ ಮೇಲುಸೇತುವೆ ಮೂಲಕ ಬಸ್‌ಗಳು ಹೋಗಲು ಆಗುತ್ತದೆಯೆ ಎಂಬುದನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೀಣ್ಯದಲ್ಲಿರುವ ಬಸ್‌ ಟರ್ಮಿನಲ್‌ಗೆ ಸರ್ಕಾರಿ ಹಾಗೂ ಖಾಸಗಿ ಬಸ್‌ಗಳನ್ನು ಕಳುಹಿಸಲು ವ್ಯವಸ್ಥೆ ಮಾಡಬೇಕು. ಪಾದಚಾರಿ ಮಾರ್ಗ ದುರಸ್ತಿ, ಪಾದಚಾರಿ ಮಾರ್ಗ ಇಲ್ಲದ ಕಡೆ ಹೊಸದಾಗಿ ಮಾರ್ಗ ನಿರ್ಮಿಸಬೇಕು. ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ ಕೂಡಲೆ ಟೆಂಡರ್‌ ಮಾಡಬೇಕು. 4ಜಿ ವಿನಾಯಿತಿ ಅಡಿ ತ್ವರಿತವಾಗಿ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು. ಬೀದಿ ದೀಪಗಳನ್ನು ಅಳವಡಿಸಬೇಕೆಂದ ಅವರು, ದೀರ್ಘಾವಧಿ ಯೋಜನೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇಂಟಿಗ್ರೇಟೆಡ್‌ ಟ್ರಾಫಿಕ್‌ ಮ್ಯಾನೇಜ್ಮೆಂಟ್‌ ಪ್ಲಾನ್‌ ಮಾಡುತ್ತಿದ್ದು, ಶೀಘ್ರ ಯೋಜನೆ ರೂಪಿಸಲು ಬಿಡಿಎ ಆಯುಕ್ತರಿಗೆ ಸೂಚನೆ ನೀಡಿದರು.

Edited By : Shivu K
Kshetra Samachara

Kshetra Samachara

29/06/2022 11:38 am

Cinque Terre

5.25 K

Cinque Terre

1

ಸಂಬಂಧಿತ ಸುದ್ದಿ