ದೇವನಹಳ್ಳಿ: 75ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ 2022-23ನೇ ಸಾಲಿನ ಮುಂಗಾರು ಹಂಗಾಮಿನ ಪ್ರಧಾನ್ ಮಂತ್ರಿ ಫಾಸಲ್ ಬೀಮಾ ಯೋಜನೆ (ವಿಮಾ) ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಹಸಿರು ನಿಶಾನೆ ತೋರಿದರು.
ಇದೇ ವೇಳೆ ಜಿಲ್ಲಾಧಿಕಾರಿ ಶ್ರೀನಿವಾಸ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಆದೇಶದನ್ವಯ ಜುಲೈ 01 ರಿಂದ 7 ದಿನಗಳ ಕಾಲ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಪ್ರಚಾರ ಆಂದೋಲನ ವಾಹನ ಜಿಲ್ಲೆಯಾದ್ಯಂತ ಸಂಚರಿಸಲಿದೆ. ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯ್ತಿಗಳಲ್ಲಿ ಸಂಚರಿಸಲಿದೆ ಎಂದರು. ಈ. ಯೋಜನೆಯಡಿ 10ಬೆಳೆಗಳನ್ನು ಗುರ್ತಿಲಾಗಿದೆ. ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಲಿ ಬೆಳೆವಿಮಾ ನೋಂದಣಿ ಮಾಡಿಕೊಳ್ಳುವ ಮೂಲಕ ಯೋಜನೆಯ ಸಂಪೂರ್ಣ ಲಾಭ ಪಡೆದುಕೊಳ್ಳಬೇಕು ಎಂದರು.
ಯೋಜನೆ ಕುರಿತ ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರಗಳು ಹಾಗೂ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬೇಕು. ರೈತರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗದ ಕಾರಣ ಇದುವರೆಗೂ ವಿಮಾ ಪರಿಹಾರ ಹಣ ದೊರೆಯದೆ ವಂಚಿತರಾಗಿರುವ ರೈತರು ತಮ್ಮ ಆಧಾರ್ ಸಂಖ್ಯೆನ ಬ್ಯಾಂಕ್ ಖಾತೆಗೆ ಜೋಡಣೆ ಮಾಡಿಸಬೇಕೆಂದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ,ತಹಸೀಲ್ದಾರ್‌ರು, ವಿಮಾಕಂಪನಿ ಪ್ರತಿನಿಧಿಗಳು ಉಪಸ್ಥಿತರಿದ್ದರು.
Kshetra Samachara
01/07/2022 11:02 pm