ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯುತ್ ಸಂಪರ್ಕ ಬೇಕಾದವರಿಗೆ ಸಿಹಿ ಸುದ್ದಿ, OC ರೂಲ್ಸ್ ತೆಗೆದ ವಿದ್ಯುತ್ ನಿಯಂತ್ರಣ ಆಯೋಗ

ಬೆಂಗಳೂರು: ವಿದ್ಯುತ್ ಸಂಪರ್ಕ ಪಡೆಯಲು ಓಸಿ ನಿಯಮವನ್ನು KREC ತೆಗೆದು ಹಾಕಿದ್ದು, ಇನ್ಮುಂದೆ ವಿದ್ಯುತ್ ಸಂಪರ್ಕ ಪಡೆಯಲು ಒಸಿ ಕಡ್ಡಾಯವಲ್ಲ. ಈ ಬಗ್ಗೆ ಇಂಧನ ಸಚಿವ ವಿ. ಸುನೀಲ್ ಕುಮಾರ್ ಮಾಹಿತಿ ನೀಡಿದ್ದಾರೆ.

ಉದ್ಯಮ, ವಾಣಿಜ್ಯ ಮಳಿಗೆ, ವಾಸದ ಮನೆಗೆ ಒಸಿ ಅಗತ್ಯವಿತ್ತು. ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳಿಂದ ಒಸಿ ಪಡೆಯಬೇಕಾಗಿತ್ತು. ಒಸಿ ಇದ್ದವರಿಗೆ ಮಾತ್ರ ವಿದ್ಯುತ್ ಸಂಪರ್ಕ ನೀಡಲಾಗುತ್ತಿತ್ತು. ಸಿಎಂ ಅನುಮೋದನೆಯೊಂದಿಗೆ ಸರ್ಕಾರ ಮನವಿ ಸಲ್ಲಿಸಿದ್ದು, ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗ ನಿಯಮ ತೆಗೆದುಹಾಕಿದೆ. 

ಬಿಜೆಪಿಯ ಬೆಂಗಳೂರು ಶಾಸಕರು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರನ್ನು ಇತ್ತೀಚೆಗೆ ಭೇಟಿ ಮಾಡಿ ನಿಯಮ ಬದಲಾವಣೆ ಮಾಡುವಂತೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಾಧ್ಯತೆಯನ್ನು ಪರಿಶೀಲನೆಗೆ ಕ್ರಮ ಕೈಗೊಳ್ಳುವಂತೆ ಸುನೀಲ್ ಕುಮಾರ್ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿದ್ದರು. ನಂತರ ಕೆಇಆರ್ ಸಿಗೆ ಪತ್ರ ಬರೆಯಲಾಗಿತ್ತು. ಈ ಬಗ್ಗೆ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಆಯೋಗ ಹೊರಡಿಸಿದ ಆದೇಶ ಈಗ ರಾಜ್ಯಪತ್ರದ ಮೂಲಕ ಅಧಿಕೃತಗೊಂಡಿದೆ. ಇನ್ನು ಮುಂದೆ ಗುರುತಿನ ಚೀಟಿ ಹಾಗೂ ಸ್ವತ್ತಿನ ಹಕ್ಕುಪತ್ರ ಇದ್ದರೆ ವಿದ್ಯುತ್ ಸಂಪರ್ಕ ಪಡೆಯಬಹುದಾಗಿದೆ.

Edited By : PublicNext Desk
Kshetra Samachara

Kshetra Samachara

03/07/2022 08:07 pm

Cinque Terre

844

Cinque Terre

0

ಸಂಬಂಧಿತ ಸುದ್ದಿ