ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಆರ್.ಲತಾ. ನೇಮಕ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆರ್.ಲತಾ ರವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಮೊದಲು ಜಿಲ್ಲಾಧಿಕಾರಿಯಾಗಿದ್ದ ಕೆ.ಶ್ರೀನಿವಾಸ್ ರವರನ್ನು ವರ್ಗಾವಣೆ ಮಾಡಿದ್ದು, ಆರ್.ಲತಾ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಹುದ್ದೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವರ್ಗಾವಾಗಿದ್ದಾರೆ. ಈ ಮೊದಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯ್ತಿ CEO ಆಗಿ ಗ್ರಾಮಾಂತರ ಜಿಲ್ಲೆಗೆ ಲತಾ ಪರಿಚಿತರು.

ಈಗ ಜಿಲ್ಲಾಧಿಕಾರಿ ಜವಾಬ್ದಾರಿಯನ್ನು ಆರ್.ಲತಾ ರವರು ನಿರ್ವಹಿಸಲಿದ್ದಾರೆ. ಸರ್ಕಾರದ ಅಧೀನ ಕಾರ್ಯದರ್ಶಿ ನಾಗಪ್ಪ.ಎಸ್.ಪರೀತ್ ಆದೇಶ ಹೊರಡಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

11/07/2022 10:45 pm

Cinque Terre

1.42 K

Cinque Terre

0

ಸಂಬಂಧಿತ ಸುದ್ದಿ