ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಮಾರನಗೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ ಕಾರ್ಯಕ್ರಮ ನಡೆಯಿತು. ಜಿಲ್ಲಾಡಳಿತ ವ್ಯಾಪ್ತಿಯ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಮಾರನಗೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ ಕಾರ್ಯಕ್ರಮ ನಡೆಯಿತು.

ಜಿಲ್ಲಾಡಳಿತ ವ್ಯಾಪ್ತಿಯ 28ಸರ್ಕಾರಿ ಇಲಾಖೆಗಳಿಂದ 328 ಅರ್ಹ ಫಲಾನುಭವಿಗಳನ್ನು ಗುರ್ತಿಸಿ ಅವರಿಗೆ ಸಾಧನ ಸೌಲಭ್ಯ ವಿತರಿಸಲಾಯ್ತು. ಜಿಲ್ಲಾಧಿಕಾರಿಗಳ ಪರವಾಗಿ ತಹಶೀಲ್ದಾರ್ ಮಹೇಶ್ ಕುಮಾರ್ ಜವಾಬ್ದಾರಿಲಿ, ಸಚಿವ MTB ನಾಗರಾಜ್, ಶಾಸಕ ಶರತ್ ಬಚ್ಚೇಗೌಡರು, ಗಣಗಲೂರು ಗ್ರಾಮಪಂಚಾಯ್ತಿ ಸದಸ್ಯರು, ಗ್ರಾಮಸ್ಥರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು.

ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಗಣಗಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರನಗೆರೆ, ಬಾಗೂರು, ಗಣಗಲೂರು, ಗುಂಡೂರು, ಸಿದ್ಧನಪುರ, ಶಿವನಾಪುರ, ತಿರುವರಂಗ, ತತ್ತನೂರು ಗ್ರಾಮಗಳಿಂದ ಬಂದಂತಹ ದೂರು ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡುವುದಾಗಿ ತಹಶಿಲ್ದಾರ್ ತಿಳಿಸಿದರು.

-ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ಹೊಸಕೋಟೆ..

Edited By : Shivu K
Kshetra Samachara

Kshetra Samachara

16/07/2022 09:21 pm

Cinque Terre

2.53 K

Cinque Terre

0

ಸಂಬಂಧಿತ ಸುದ್ದಿ