ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಾಹನಗಳ ವಾಯು ಮಾಲಿನ್ಯ ತಪಾಸಣೆ ದರ ಹೆಚ್ಚಳ

ಬೆಂಗಳೂರು: ಜಿಎಸ್‌ಟಿ ದರ ಏರಿಕೆಯಿಂದಾಗಿ ಜನರ ಜೇಬಿಗೆ ಕತ್ತರಿ ಬಿದ್ದಿದೆ. ದಿನಬಳಕೆ ವಸ್ತುಗಳ ಬೆಲೆ ಈಗಾಗಲೇ ಏರಿಕೆಯಾಗಿದೆ. ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದೀಗ ವಾಹನಗಳ ವಾಯು ಮಾಲಿನ್ಯ ತಪಾಸಣೆ ದರ ಏರಿಕೆ ಮಾಡಲಾಗಿದೆ. ಮಾಲೀಕರು ಅಸಮಧಾನ ವ್ಯಕ್ತ ಪಡಿಸುತ್ತಿದ್ದಾರೆ.

ಪರಿಸರ ಮಾಲಿನ್ಯಕ್ಕೆ ಅತಿ ಹೆಚ್ಚು ಹೊಗೆ ಉಗುಳುವ ವಾಹನಗಳಿಗೆ ದಂಡ ವಿಧಿಸಲಾಗುತ್ತದೆ. ಆದರಿಂದ ಎಲ್ಲಾ ವಾಹನಗಳು ವಾಯು ಮಾಲಿನ್ಯ ತಪಾಸಣೆ ಮಾಡಿಸಬೇಕು. ರಾಜ್ಯದೆಲ್ಲೆಡೆ ಖಾಸಗಿ ಸಹಭಾಗಿತ್ವದಲ್ಲಿ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ಪೊಲೀಸ್ ತಪಾಸಣೆ ವೇಳೆ ವಾಹನ ಸವಾರರು ವಾಯು ಮಾಲಿನ್ಯ ತಪಾಸಣೆ ದಾಖಲೆಯನ್ನು ತೋರಿಸಬೇಕು. ನಿಗದಿತ ಸಮಯದಲ್ಲಿ ವಾಹನಗಳನ್ನು ವಾಯು ಮಾಲಿನ್ಯ ತಪಾಸಣೆಗೆ ಒಳಪಡಿಸಬೇಕಾಗುತ್ತದೆ. ಈಗ ಇದೆ ವಿಚಾರ ವಾಹನ ಸವಾರರ ತಲೆ ಕೆಡಿಸಿದೆ.

Edited By : Nagaraj Tulugeri
PublicNext

PublicNext

19/07/2022 05:18 pm

Cinque Terre

13.19 K

Cinque Terre

0

ಸಂಬಂಧಿತ ಸುದ್ದಿ