ಬೆಂಗಳೂರು : ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿದ್ದಂತೆ ವಾರ್ಡ್ವಾರು ಮತದಾರರ ಪಟ್ಟಿ ಸಿದ್ಧಪಡಿಸಲು ರಾಜ್ಯಸರ್ಕಾರ ಮುಂದಾಗಿದೆ.
ಬೆಂಗಳೂರಿನ ವಿಧಾನಸಭಾ ಕ್ಷೇತ್ರವಾರು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ವಾರ್ಡ್ ವ್ಯಾಪ್ತಿಗೆ ಅಧಿಕ ಜಿಲ್ಲಾ ಚುನಾವಣಾಧಿಕಾರಿಗಳನ್ನ ನೇಮಿಸಲು ಆದೇಶ ಹೊರಡಿಸಿದೆ.
ವಾರ್ಡ್ ವಾರು ಮತದಾರರ ಪಟ್ಟಿಗಾಗಿ ರಾಜ್ಯ ಸರ್ಕಾರ ನೇಮಿಸಿರುವ ಜಿಲ್ಲಾ ಚುನಾವಣಾಧಿಕಾರಿಗಳು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.ಇನ್ನುಅಧಿಕ ಜಿಲ್ಲಾ ಚುನಾವಣಾಧಿಕಾರಿಗಳು ವಾರ್ಡ್ ವಾರು ಮತದಾರರ ಪಟ್ಟಿ ಸಿದ್ಧಪಡಿಸಲಿದ್ದಾರೆ.
ನೇಮಕವಾಗಿರುವ ಅಧಿಕ ಜಿಲ್ಲಾ ಚುನವಣಾಧಿಕಾರಿಗಳು ಬಿಬಿಎಂಪಿ ಜಂಟಿ ಆಯುಕ್ತರು, ಉಪ ಆಯುಕ್ತರಾಗಿದ್ದಾರೆ.ಸದ್ಯ 198 ವಾರ್ಡ್ ಗಳನ್ನು 243ಕ್ಕೆ ಹೆಚ್ಚಿಸಲಾಗಿದೆ.ಬಹುತೇಕ ವಾರ್ಡ್ ಗಳ ಸ್ವರೂಪ ಬದಲಾಗಿದ್ದು, ಅದಕ್ಕೆ ತಕ್ಕಂತೆ ಮತದಾರರ ಪಟ್ಟಿ ಸಿದ್ಧಪಡಿಸಲು ಆದೇಶಿಸಲಾಗಿದೆ.
ಜಿಲ್ಲಾ ಚುನಾವಣಾಧಿಕಾರಿಗಳ ವಿವರ, ವ್ಯಾಪ್ತಿ ನೋಡುವುದಾದ್ರೆ
ಬಿಬಿಎಂಪಿ ವಿಶೇಷ ಆಯುಕ್ತ (ಆಡಳಿತ)
ರಾಜರಾಜೇಶ್ವರಿನಗರ, ಶಿವಾಜಿನಗರ, ಶಾಂತಿನಗರ, ಗಾಂಧಿನಗರ, ರಾಜಾಜಿನಗರ, ಚಾಮರಾಜಪೇಟೆ, ಚಿಕ್ಕಪೇಟೆ
ಜಂಟಿ ಆಯುಕ್ತರು ಬಿಬಿಎಂಪಿ ದಕ್ಷಿಣ ವಲಯ :
ಗೋವಿಂದರಾಜನಗರ, ವಿಜಯನಗರ, ಬಸವನಗುಡಿ, ಪದ್ಮನಾಭನಗರ, ಬಿಟಿಎಂ ಲೇಔಟ್, ಜಯನಗರ, ಬೊಮ್ಮನ ಹಳ್ಳಿ
ಜಂಟಿ ಆಯುಕ್ತರು ಮಹದೇವಪುರ ವಲಯ :
ಕೆಆರ್ ಪುರ, ಮಹಾಲಕ್ಷ್ಮೀಲೇಔಟ್, ಮಲ್ಲೇಶ್ವರ, ಹೆಬ್ಬಾಳ, ಪುಲಕೇಶಿನಗರ, ಸರ್ವಜ್ಞನಗರ, ಸಿವಿ ರಾಮನ್ನಗರ
ಬೆಂಗಳೂರು ನಗರ ಜಿಲ್ಲಾಅಧಿಕಾರಿ: ಯಲಹಂಕ, ಬ್ಯಾಟರಾಯನಪುರ, ದಾಸರಹಳ್ಳಿ ಮಹದೇವಪುರ, ಬೆಂಗಳೂರು ದಕ್ಷಿಣ, ಆನೇಕಲ್
Kshetra Samachara
23/07/2022 11:57 am