ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅನುಕೂಲಕರವಾಗಿರಲೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಇಂದು ಪೂರ್ವ ವಲಯ ವ್ಯಾಪ್ತಿಯ ವಸಂತನಗರದ ಸರ್ದಾರ್ ಪಟೇಲ್ ಭವನದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿನಿಯಮ 2020ರ ಅನುಸಾರ 243 ವಾರ್ಡ್ ಗಳನ್ನಾಗಿ ಮಾಡಿದ್ದು, ಅದರಂತೆ ಇದೇ ಆಗಸ್ಟ್ ತಿಂಗಳ ಮೊದಲನೆ ಶನಿವಾರ 198 ವಾರ್ಡ್ ಗಳಲ್ಲಿ ನಡೆಯುವ ಸಭೆಗಳಲ್ಲಿ, 3ನೇ ಶನಿವಾರದಿಂದ 243 ವಾರ್ಡ್ ಗಳ ಅನುಸಾರ ವಾರ್ಡ್ ಸಮಿತಿ ಸಭೆಗಳು ನಡೆಸುವ ಬಗ್ಗೆ ವಾರ್ಡ್ ಸಮಿತಿಯ ಸದಸ್ಯರು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ನಾಗರೀಕರಿಗೆ ನಿಖರ ಮಾಹಿತಿ ಒದಗಿಸಬೇಕು. ಅಲ್ಲದೆ ಹೊಸ ವಾರ್ಡ್ ಗಳಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲು ವಲಯ ಆಯುಕ್ತರಿಗೆ ಸೂಚನೆ ನೀಡಿದರು.
Kshetra Samachara
02/08/2022 08:23 pm