ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಎರಡು ಹೆಚ್ಚುವರಿ ಎಸ್‌ಡಿಆರ್‌ಎಫ್ ತಂಡ ರಚನೆಗೆ ಸಿಎಂ‌ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್‌ಡಿಆರ್ಎಫ್ ತಂಡಗಳನ್ನು ರಚಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಂದು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ, ಭೂಕುಸಿತ, ಬೆಳೆಹಾನಿ ಮೊದಲಾದ ವಿಷಯಗಳ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಈಗಾಗಲೇ ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್ ತಂಡಗಳನ್ನು ನಿಯೋಜಿಸಿದ್ದು, ಜಿಲ್ಲಾಧಿಕಾರಿಗಳು ಈ ತಂಡದೊಂದಿಗೆ ನಿಕಟ ಸಂಪರ್ಕ ಹೊಂದಿ ತುರ್ತು ಸಂದರ್ಭಗಳಲ್ಲಿ ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲು ಸನ್ನದ್ಧರಾಗಿರಬೇಕು ಎಂದು ಸಲಹೆ ನೀಡಿದ್ದಾರೆ.

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಹಣದ ಕೊರತೆ ಇಲ್ಲ. ಇಂದು 21 ಜಿಲ್ಲೆಗಳಿಗೆ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಜೀವಹಾನಿ, ಮನೆ ಹಾನಿ ಪ್ರಕರಣಗಳಲ್ಲಿ ತ್ವರಿತವಾಗಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಅತಿವೃಷ್ಟಿಯಿಂದ ಹಾನಿಗೊಳಗಾದ ಸಂಪರ್ಕ ಕಡಿತವಾಗುವ ರಸ್ತೆ, ಸೇತುವೆಗಳ ದುರಸ್ತಿ ಯನ್ನು ಕೂಡಲೇ ಕೈಗೊಂಡು ಸಂಪರ್ಕ ಮರುಸ್ಥಾಪಿಸಬೇಕು. ಅಂತೆಯೇ ವಿದ್ಯುತ್ ಕಂಬಗಳು ಹಾಗೂ ಟ್ರಾನ್ಸ್‌ಫಾರ್ಮರ್‌ಗಳ ಹಾನಿ ಕುರಿತು ಜಾಗೃತರಾಗಿ, ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ತ್ವರಿತವಾಗಿ ಮರುಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

Edited By : Manjunath H D
PublicNext

PublicNext

07/08/2022 11:25 am

Cinque Terre

28.63 K

Cinque Terre

0

ಸಂಬಂಧಿತ ಸುದ್ದಿ