ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆ ಬಂದಾಗ ಪ್ರವಾಹ ಉಂಟಾಗಬಲ್ಲ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿದ್ದು, ಅದರಂತೆ 50 ಕಡೆ ಸೆನ್ಸರ್ ಗಳನ್ನು ಅಳವಡಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಮದ್ಯಮಗಳಿಗೆ ಮಾಹಿತಿ ನೀಡಿರುವ ತುಷಾರ್ ಗಿರಿನಾಥ್ ಮಳೆಯಿಂದಾಗಿ ರಸ್ತೆಗಳು ಮತ್ತೆ ಹಾಳಾಗಿದೆ. ನಗರದ ಹಲವಡೆ ಮಳೆಯಿಂದಾಗಿ ಸಂಪೂರ್ಣ ಜಲಾವೃತ್ತ ವಾಗಿದೆ. ಅಂತಹ ನಗರದಲ್ಲಿ ಹೆಚ್ಚಿನ ಗಮನಹರಿಸಿ ಸಮಸ್ಯೆ ಬಗೆಹರಿಸಲು ಎಲ್ಲಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ಈಗಾಗಲೇ ನಗರದಲ್ಲಿ 50 ಕಡೆಗಳಲ್ಲಿ ಸಂವೇದಕಗಳನ್ನು (ಸೆನ್ಸರ್) ಅಳವಡಿಸಲಾಗಿದೆ. ಈಗಾಗಲೇ ನಗರದ ಎಲ್ಲಾ ಭಾಗದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. 54 ಕಡೆಗಳಲ್ಲಿ ಮಳೆ ನೀರು ನುಗ್ಗಿ ಅನಾಹುತ ಆಗುತ್ತಿದ್ದು, ಅಂತಹ ಕಡೆಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಗಿರಿನಾಥ್ ಹೇಳಿದ್ದಾರೆ.
Kshetra Samachara
11/08/2022 04:34 pm