ಬೆಂಗಳೂರು ವಿಧಾನಸೌಧ: ರೈತರು ಸಂಕಷ್ಟ ದಲ್ಲಿರುವ ಸಂದರ್ಭದಲ್ಲಿ ಬ್ಯಾಂಕ್ ಗಳು ರೈತರ ಆಸ್ತಿ ಜಪ್ತಿ ಮಾಡುವುದು ನೋಟೀಸ್ ಜಾರಿ ಮಾಡುವ ಕೆಲಸ ಮಾಡುತ್ತಿದೆ. ಇದಕ್ಕೆ ಅಂತ್ಯ ಹಾಡಲು ಕಾನೂನಿನ ತಿದ್ದುಪಡಿ ತಂದು ಅವರ ಆಸ್ತಿಪಾಸ್ತಿ ಜಪ್ತಿ ಮಾಡುವುದನ್ನು ನಿಷೇಧ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಬದ್ಧತೆಯಿಂದ ಕೆಲಸ ಮಾಡುವ ಕ್ರಿಯಾಶಕ್ತಿಯೇ ಭಕ್ತಿಯ ಶಕ್ತಿ. ಗುರುಗಳಿಂದ ಪ್ರೇರಣೆ ಪಡೆದು ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ನಮ್ಮ ಪ್ರಯತ್ನ ಮಾಡಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ರೈತರ ಮಕ್ಕಳಿಗೆ ವಿದ್ಯಾನಿಧಿ ರೂಪಿಸಲಾಯಿತು. 14 ಲಕ್ಷ ರೈತರ ಮಕ್ಕಳಿಗೆ ವಿದ್ಯಾನಿಧಿ ನೀಡಲಾಗಿದೆ. ರೈತ ಕೂಲಿಕಾರ ಮಕ್ಕಳಗೆ, ನೇಕಾರರಿಗೆ, ಮೀನುಗಾರರಿಗೆ, ಆಟೋ ರಿಕ್ಷಾ ಚಾಲಕರು ಹಾಗೂ ಟ್ಯಾಕ್ಸಿ ಚಾಲಕರಿಗೆ ಯೋಜನೆ ವಿಸ್ತರಣೆಯಾಗಿದೆ. ಶಿಕ್ಷಣದಿಂದ ಉದ್ಯೋಗ ನೀಡಬಹುದೆಂದು ಯೋಜನೆ ರೂಪಿಸಿದೆ.
ರಾಜ್ಯದ ಮಕ್ಕಳು ಹಣದ ಕೊರತೆಯಿಂದ ಓದು ನಿಲ್ಲಿಸಬಾರದು, ಅವರ ಭವಿಷ್ಯ ಉಜ್ವಲವಾಗಿ ನಿರ್ಮಾಣವಾಗಲಿ ಎಂದು ಈ ಕೆಲಸ ಮಾಡಲಾಗಿದೆ. ನೀರಾವರಿ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದೆ. 3 ಲಕ್ಷ ದವರೆಗೆ ಬಡ್ಡಿರಹಿತ ಸಾಲ ನೀಡಿದರೂ ಅತಿವೃಷ್ಟಿ, ಅನಾವೃಷ್ಟಿ ಕಾರಣದಿಂದ ರೈತರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈ ವರ್ಷ ಉತ್ತಮ ಮಳೆಯಾಗಿದೆ. ಕೆರೆ ಕಟ್ಟೆ ತುಂಬಿ ನೀರು ಇನ್ನು 2-3 ವರ್ಷಗಳಿಗೆ ತೊಂದರೆ ಇಲ್ಲ. ಕೆಲವೆಡೆ ಪ್ರವಾಹವಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.
Kshetra Samachara
25/09/2022 12:33 pm