ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಗೆಹರಿಯದ ಮೀಸಲಾತಿ ಗೊಂದಲ, ಸರ್ಕಾರಕ್ಕೆ ಮಹತ್ವದ ವರದಿ ಕೇಳಿದ ಹೈಕೋರ್ಟ್

ಬಿಬಿಎಂಪಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ಗಳ ಮಹಿಳಾ ಮೀಸಲಾತಿ ಗೊಂದಲ ಇನ್ನೂ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ವಾರ್ಡ್ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟಕ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು.

ಬಿಬಿಎಂಪಿ ವಾರ್ಡ್‌ಗಳ ಮೀಸಲು ನಿಗದಿ ಪ್ರಶ್ನಿಸಿ ಈಜಿಪುರದ ಕೆ ಮಹದೇವ ಮತ್ತಿತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಈ ವರ್ಷದೊಳಗೆ ಬಿಬಿಎಂಪಿ ಚುನಾವಣೆ ನಡೆಯಲೇಬೇಕು. ಹೊಸ ಮೀಸಲಾತಿ ರೂಪಿಸಲು ಎಷ್ಟು ಕಾಲಾವಕಾಶ ಬೇಕು? ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

ಅಲ್ಲದೇ ಅಲ್ಲಿಯವರೆಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸದಂತೆ ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿದೆ. ಮೀಸಲಾತಿಗೆ ಸಂಬಂಧಿಸಿದ ಇತರೆ ಹಿಂದುಳಿದ ವರ್ಗಗಳ ಆಯೋಗದ ವರದಿಗೆ ಯಾವ ದಾಖಲೆ ಆಧರಿಸಲಾಗಿದೆ ಎಂಬುದಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಇಂದು ನಿರ್ದೇಶಿಸಿದೆ.

Edited By : Abhishek Kamoji
Kshetra Samachara

Kshetra Samachara

28/09/2022 07:40 pm

Cinque Terre

1.14 K

Cinque Terre

0

ಸಂಬಂಧಿತ ಸುದ್ದಿ