ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಹಾಗೂ ಸರ್ವೇ ಕಾರ್ಯ

ಬಿಬಿಎಂಪಿ: ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಹಾಗು ಸರ್ವೇ ಕಾರ್ಯ ಮುಂದುವರೆದಿದ್ದು, ನಗರದ ಬೊಮ್ಮನಹಳ್ಳಿ ವಲಯದ ಕೋಡಿಚಿಕ್ಕನಹಳ್ಳಿ ವ್ಯಾಪ್ತಿಯ ಜನಪ್ರಿಯ ಲೇಕ್ ವ್ಯೂ ಅಪಾರ್ಟ್ಮಮೆಂಟ್‌ ಬಳಿ 11 ಅಡಿ ಅಗಲ ಹಾಗೂ 100 ಅಡಿ ಉದ್ದದ ರಾಜಕಾಲುವೆಯ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಇಂದು ನಡೆಸಲಾಗಿದೆ.

ಬೃಹತ್ ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವುದನ್ನು ಸರ್ವೇ ನಡೆಸಿ ಮಾರ್ಕಿಂಗ್ ಮಾಡಿಕೊಂಡು, ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಪಣತ್ತೂರು, ಹೂಡಿ, ದೊಡ್ಡಾನೆಕುಂದಿ, ವರ್ತೂರು, ಕುಂದನಹಳ್ಳಿ, ಮುನ್ನೇನಕೊಳಲು, ಕಸವಹಳ್ಳಿಯ ಪ್ರದೇಶಗಳಲ್ಲಿ ಸುಮಾರು 5,000 ಮೀಟರ್ ರಾಜಕಾಲುವೆ ಒತ್ತುವರಿಯಾಗಿದ್ದು,

ಈ ಪೈಕಿ ಸರ್ವೇ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ಮಾರ್ಕಿಂಗ್ ಮಾಡಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲು ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ ರವರು ರಾಜಕಾಲುವೆ ವಿಭಾಗದ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರುತ್ತಾರೆ.

Edited By : Abhishek Kamoji
Kshetra Samachara

Kshetra Samachara

28/09/2022 07:46 pm

Cinque Terre

1.04 K

Cinque Terre

0

ಸಂಬಂಧಿತ ಸುದ್ದಿ