ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಂಟುರೋಗದಿಂದ ಮೃತಪಟ್ಟ ದನಗಳಿಗೆ 20 ಸಾವಿರ ರೂ.ಗಳ ಪರಿಹಾರ..!

ಬೆಂಗಳೂರು: ಗಂಟುರೋಗದಿಂದ ದನಗಳು ಮೃತಪಟ್ಟರೆ ಪಟ್ಟರೆ 20 ಸಾವಿರ ರೂ.ಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗಕ್ಕೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಅವರು ವಿಜಯ ಕರ್ನಾಟಕ ದಿನಪತ್ರಿಕೆಯ ವತಿಯಿಂದ ಹಾವೇರಿಯ ಗುರುಭವನದಲ್ಲಿ ಹಾವೇರಿ ಜಿಲ್ಲೆ ರಚನೆಗೊಂಡು 25 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಈ ಭಾಗದಲ್ಲಿ ದನಕರುಗಳಿಗೆ ಗಂಟು ರೋಗ ಕಂಡುಬಂದಿದೆ. ಗಂಟುರೋಗ ಹರಡದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಅದಕ್ಕೆ ಈಗಾಗಲೇ ಸೂಚನೆ ನೀಡಿ ವಿಶೇಷ ತಂಡವನ್ನು ಕಳಿಸಲಾಗುವುದು ಎಂದು ತಿಳಿಸಿದರು.

ಏಳು ಗಂಟೆಗಳ ಕಾಲ ವಿದ್ಯುಚ್ಛಕ್ತಿ ಸರಬರಾಜು ವಿದ್ಯುಚ್ಛಕ್ತಿ ಸರಬರಾಜು ಐದು ಗಂಟೆಗಳ ಕಾಲವಿದ್ದು ಇದನ್ನು ಏಳು ಗಂಟೆಗಳಿಗೆ ವಿಸ್ತರಿಸಬೇಕು ಎಂಬ ರೈತರ ಬೇಡಿಕೆಯನ್ನು ಈಡೇರಿಸಲಾಗುವುದು ಎಂದರು. ಈ ಬಗ್ಗೆ ಕೂಡಲೇ ಆದೇಶ ಹೊರಡಿಸಲಾಗುವುದು. ವಿದ್ಯುತ್ ಸಂಸ್ಥೆಗಳ ಖಾಸಗೀಕರಣವನ್ನು ನಮ್ಮ ಸರ್ಕಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Edited By : PublicNext Desk
Kshetra Samachara

Kshetra Samachara

29/09/2022 08:39 pm

Cinque Terre

760

Cinque Terre

0

ಸಂಬಂಧಿತ ಸುದ್ದಿ