ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡಲು ರೂ.2 ಕೋಟಿ ಬಿಡುಗಡೆ

ಬೆಂಗಳೂರು: ಚರ್ಮಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟ ಪ್ರಕರಣದಲ್ಲಿ ಮಾಲೀಕರುಗಳಿಗೆ ಪರಿಹಾರ ನೀಡಲು ರೂ.2 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.

ಚರ್ಮಗಂಟು ರೋಗವು ನೇರವಾಗಿ ಜಾನುವಾರುಗಳ ಉತ್ಪಾದಕತೆಯನ್ನು ಕುಂಠಿತಗೊಳಿಸುವುದರಿಂದ ರೈತರು ಹಾಗೂ ಜಾನುವಾರು ಮಾಲೀಕರ‌ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುವುದನ್ನು ತಡೆಗಟ್ಟಲು ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಚರ್ಮಗಂಟು ರೋಗದಿಂದ ಉಂಟಾಗುವ ಜಾನುವಾರುಗಳ ಮರಣದಿಂದ ರೈತರ/ಜಾನುವಾರು ಮಾಲೀಕರಿಗೆ ನಷ್ಟವನ್ನು ಭರಿಸಲು 2022ರ ಆಗಸ್ಟ್ 1ನೇ ತಾರೀಖಿನಿಂದ ಅನ್ವಯ ಆಗುವಂತೆ ಪ್ರತಿ ಹೈನು ರಾಸುಗಳಿಗೆ ಗರಿಷ್ಠ ರೂ.20000 ಮತ್ತು ಎತ್ತುಗಳಿಗೆ ರೂ.30000 ಹಾಗೂ ಪ್ರತಿ ಕರುವಿಗೆ ರೂ.5000 ಪರಿಹಾರ ನೀಡಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.

ರಾಜ್ಯದಲ್ಲಿ ಜಾನುವಾರುಗಳ ಚರ್ಮಗಂಟು ರೋಗವನ್ನು ಹತೋಟಿ ತರಲಾಗುತ್ತಿದೆ. ರಾಜ್ಯಾದ್ಯಂತ 265646 ರಾಸುಗಳಿಗೆ ಲಸಿಕೆ ನೀಡಲಾಗಿದ್ದು, ಲಭ್ಯವಿರುವ 342156 ಡೋಸ್ ಲಸಿಕೆಯನ್ನು ಜಾನುವಾರುಗಳಿಗೆ ನೀಡಲಾಗುತ್ತಿದೆ. ಈ ವಾರ 35000 ಲಸಿಕೆ ಲಭ್ಯವಾಗಲಿದ್ದು, ಚರ್ಮಗಂಟು ರೋಗವನ್ನು ನಿಯಂತ್ರಣಕ್ಕೆ ಬೇಕಾದ ಔಷಧ, ಚಿಕಿತ್ಸೆ ನೀಡಲಾಗುತ್ತಿದೆ. ರೈತರು ಆತಂಕಕ್ಕೆ ಒಳಗಾಗದೇ ಸರ್ಕಾರದೊಂದಿಗೆ ಸಹಕರಿಸುವಂತೆ ಪ್ರಭು ಚವ್ಹಾಣ್ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ಈವರೆಗೆ 23784 ರಾಸುಗಳು ಚರ್ಮಗಂಟು ರೋಗದಿಂದ ಬಳಲುತ್ತಿದ್ದು, ಈ ಪೈಕಿ 11494 ರಾಸುಗಳು ಚೇತರಿಕೆಯಾಗಿವೆ. ಇನ್ನುಳಿದ ರಾಸುಗಳಿಗೆ ಸರ್ಕಾರದಿಂದ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ 680 ಜಾನುವಾರುಗಳು ಮೃತಪಟ್ಟಿರುತ್ತವೆ.‌ ಮೃತಪಟ್ಟ ಜಾನುವಾರುಗಳ ಮಾಲೀಕರಿಗೆ ಪರಿಹಾರ ಧನ ವಿತರಣೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Edited By : PublicNext Desk
Kshetra Samachara

Kshetra Samachara

02/10/2022 05:56 pm

Cinque Terre

562

Cinque Terre

0

ಸಂಬಂಧಿತ ಸುದ್ದಿ