ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಎಸ್.ಸಿ ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರದ ನಿರ್ಧಾರ

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಹೆಚ್ಚಿಸಲು ರಚಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆ ನಡೆಯಿತು.

ಈ ಸಭೆಯಲ್ಲಿ ಪರಿಶಿಷ್ಟ ಜಾತಿಯವರಿಗೆ ಇರುವ ಮೀಸಲಾತಿ ಪ್ರಮಾಣವನ್ನು ಈಗಿರುವ 15 ಪ್ರತಿಶತದಿಂದ 17 ಪ್ರತಿಶತಕ್ಕೆ ಹಾಗೆಯೇ ಎಸ್.ಟಿ ಮೀಸಲಾತಿಯನ್ನು 3 ರಿಂದ 4 ಪ್ರತಿಶತಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿರುವುದಾಗಿ ತಿಳಿದು ಬಂದಿದೆ.

ಈ ವಿಚಾರವನ್ನು ಚರ್ಚಿಸಿ ಸರ್ಕಾರಿ ಆದೇಶವನ್ನು ಹೊರಡಿಸುವ ಸಂಬಂಧ ನಾಳೆ ಸಚಿವ ಸಂಪುಟ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Edited By : Somashekar
PublicNext

PublicNext

07/10/2022 05:44 pm

Cinque Terre

27.69 K

Cinque Terre

4

ಸಂಬಂಧಿತ ಸುದ್ದಿ