ಬಿಬಿಎಂಪಿ: 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಇದೇ ಅಕ್ಟೋಬರ್ 28 ರಂದು ರಾಜ್ಯದಾದ್ಯಂತ “ನನ್ನ ನಾಡು – ಕೋಟಿ ಕಂಠ ಗಾಯನ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯಕ್ರಮ ನಡೆಸುವ ಸಲುವಾಗಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರ ಅಧ್ಯಕ್ಷತೆಯಲ್ಲಿ ಇಂದು ವರ್ಚುವಲ್ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಆಯುಕ್ತರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ಟೋಬರ್ 28 ರಂದು ಬೆಳಗ್ಗೆ 11.00 ಗಂಟೆಗೆ ಸರಿಯಾಗಿ “ಕೋಟಿ ಕಂಠ ಗಾಯನ” ಕಾರ್ಯಕ್ರಮವನ್ನು(ಏಕ ಕಾಲದಲ್ಲಿ) ಹಮ್ಮಿಕೊಂಡಿದ್ದು, ಪಾಲಿಕೆಯ ಎಲ್ಲಾ ವಲಯಗಳ ವಿವಿಧ ಪ್ರಮುಖ ಸ್ಥಳಗಳನ್ನು ಗುರುತಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
PublicNext
12/10/2022 06:57 pm