ಬೆಂಗಳೂರು: ದೊಮ್ಮಸಂದ್ರ ವರ್ತೂರು ಮುಖ್ಯರಸ್ತೆಯಲ್ಲಿರುವ ಇಂಟರ್ ನೇಷನಲ್ ಬೆಂಗಳೂರು ಶಾಲೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ಆನೇಕಲ್-ಚಂದಾಪುರ ಮುಖ್ಯರಸ್ತೆಯ ಮರಸೂರು ಗೇಟ್ ಬಳಿಯ ಸ್ಫೂರ್ತಿ ನರ್ಸಿಂಗ್ ಕಾಲೇಜಿನಲ್ಲಿಯೂ ಕೊರೊನಾ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಭೇಟಿ ನೀಡಿದರು.
ಸ್ಫೂರ್ತಿ ಕಾಲೇಜಿನ ಒಟ್ಟು 168 ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿದ್ದಾರೆ. ಮೂವರಿಗೆ ಪಾಸಿಟಿವ್ ಕಂಡುಬಂದ ಹಿನ್ನೆಲೆ 52 ಮಂದಿಗೆ ತಪಾಸಣೆ ನಡೆಸಿದಾಗ 12 ಮಂದಿಗೆ ಪಾಸಿಟಿವ್ ಆಗಿದೆ. ಇದೀಗ ಎಲ್ಲ ಎಲ್ಲರ ತಪಾಸಣೆಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ದಿ ಇಂಟರ್ ನೇಷನಲ್ ಸ್ಕೂಲ್ ನಲ್ಲಿ 497 ವಿದ್ಯಾರ್ಥಿಗಳಿಗೆ ಟೆಸ್ಟ್ ಮಾಡಲಾಗಿದ್ದು, ಓರ್ವ ಸಿಬ್ಬಂದಿ ಒಳಗೊಂಡಂತೆ
34 ಮಂದಿಗೆ ಪಾಸಿಟಿವ್ ದೃಢವಾಗಿದ್ದು, ಶಾಲೆಗೆ ರಜೆ ಘೋಷಿಸಲಾಗಿದೆ.
ಆತಂಕ ಪಡುವ ಅಗತ್ಯ ಇಲ್ಲವಾದರೂ ವೈದ್ಯರ ತಂಡ ನಿಗಾ ವಹಿಸುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಸ್ಫೂರ್ತಿ ಕಾಲೇಜಿನಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಆಗಿರುವವರಿಗೆ ಇದೀಗ ಪಾಸಿಟಿವ್ ಕಂಡುಬಂದಿದೆ. ಇಬ್ಬರನ್ನು ಕೇರಳ, ಒಬ್ಬರನ್ನು ಮುಂಬೈಗೆ ಕಳಿಸಲಾಗಿದೆ.
ಅನ್ಯ ರಾಜ್ಯಗಳಿಂದ ಬರುವವರ ಮೇಲೆ ನಿಗಾ ಇಟ್ಟು ಕೋವಿಡ್ ಪರೀಕ್ಷೆ ನಡೆಸಲಾಗ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Kshetra Samachara
27/11/2021 09:23 pm