ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದ.ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಿಗೆ ಕೋವಿಡ್ ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ಆತಂಕ ಶುರುವಾಗಿರುವ ಬೆನ್ನಲ್ಲಿ ರಾಜಧಾನಿ ಬೆಂಗಳೂರಿನ ಜನರಿಗೆ ಮತ್ತೊಂದು ಶಾಕ್​ ಎದುರಾಗಿದೆ. ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಕ್ಷಿಣ ಆಫ್ರಿಕಾದಿಂದ ಇಂದು ಬಂದಿಳಿದ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರಲ್ಲಿ ಕಂಡುಬಂದಿರುವ ವೈರಸ್​ ಹೊಸ ರೂಪಾಂತರಿಯೇ ಅನ್ನೋ ಬಗ್ಗೆ ತಪಾಸಣೆ ನಡೆಸಲಾಗುತ್ತಿದೆ.

ಹೊರ ದೇಶಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ. ರಾಜ್ಯ ರಾಜಧಾನಿಯಲ್ಲಿ ನಿನ್ನೆ (ಶನಿವಾರ) 149 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಬ್ಬರು ಸೋಂಕಿಗೆ ಬಲಿಯಾಗಿದ್ದು, ಒಟ್ಟು 12,34,377 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Edited By : Vijay Kumar
Kshetra Samachara

Kshetra Samachara

28/11/2021 07:38 am

Cinque Terre

194

Cinque Terre

0

ಸಂಬಂಧಿತ ಸುದ್ದಿ