ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕೋವಿಡ್ ಆತಂಕ ಹೆಚ್ಚಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಫೀಲ್ಡ್‌ಗೆ ಇಳಿದು ಮಾಸ್ಕ್ ಹಾಕದವರಿಗೆ ಫೈನ್ ಹಾಕಲು ಮುಂದಾಗಿದ್ದಾರೆ.
ಹೌದು. ನಿನ್ನೆ (ಶನಿವಾರ) ನಡೆದ ಸಭೆಯಲ್ಲಿ ಕೊರೊನಾ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ತಜ್ಞರು ಸರ್ಕಾರಕ್ಕೆ ಸೂಚಿಸಿದ್ದಾರೆ. ಇದರಿಂದಾಗಿ ಮುಂಜಾಗ್ರತ ಕ್ರಮವನ್ನು ತೆಗೆದುಕೊಳ್ಳಲು ಸರ್ಕಾರ ಅಧಿಕಾರಿಗಳಿಗೆ ಕೆಲ ಸಲಹೆ ನೀಡಿದೆ.
ಕೊರೊನಾ ಮೂರನೇ ಅಲೆ ಹಾಗೂ ದಕ್ಷಿಣ ಆಫ್ರಿಕಾದಲ್ಲಿ ಕಂಡು ಬಂದಿರುವ ಓಮಿಕ್ರಾನ್ ರೂಪಾಂತರ ವೈರಸ್‌ನಿಂದ ಜನರನ್ನು ರಕ್ಷಿಸಲು ಬಿಬಿಎಂಪಿ ಮುಂದಾಗಿದೆ. ಹೀಗಾಗಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಹಾಗೂ ಸಾಮಾಜಿಕ ಅಂತರದ ಬಗ್ಗೆ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ಮಾಸ್ಕ್ ಹಾಕದವರಿಗೆ ದಂಡ ಹಾಕಲು ಸಿದ್ಧರಾಗಿದ್ದಾರೆ ಎಂದು ಹೇಳಲಾಗಿದೆ.
Kshetra Samachara
28/11/2021 03:42 pm