ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜರ್ಮನಿಯಿಂದ ಬಂದ ಇಬ್ಬರಿಗೆ ಕೊರೊನಾ ಸೋಂಕು ದೃಢ

ದೇವನಹಳ್ಳಿ : ಜರ್ಮನಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಬ್ಬರು ಪ್ರಯಾಣಿಕರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಬೋರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ 3 ಗಂಟೆ ಸಮಯದಲ್ಲಿ ಜರ್ಮನಿಯಿಂದ ಬಂದ ಪ್ರಯಾಣಿಕರ ಆರ್ ಟಿ ಪಿಸಿಆರ್ ಟೆಸ್ಟ್ ಮಾಡಿದ್ದಾಗ, ಇಬ್ಬರು ಪ್ರಯಾಣಿಕರಿಗೆ ಸೋಂಕಿರುವುದು ದೃಢಪಟ್ಟಿದೆ. 40 ಮತ್ತು 50 ವರ್ಷದ ಇಬ್ಬರಿಗೆ ಸೋಂಕು ದೃಢಪಟ್ಟಿದೆ.

ಇನ್ನು ಇಬ್ಬರ ಸ್ಯಾಂಪಲ್ಸ್ ಜಿನೋಮಿಕ್ ಸೀಕ್ವೆನ್ಸಿಂಗ್ ಗೆ ಕಳಿಸಲಾಗಿದ್ದು ಅಲ್ಲಿಂದ ಬರುವ ವರದಿ ಆಧಾರದ ಮೇಲೆ ಒಮಿಕ್ರಾನ್ ವೈರಸ್ ಬಗ್ಗೆ ತಿಳಿಯಲಿದೆ. ಇನ್ನು ಬಂದ ಇಬ್ಬರು ಸೋಂಕಿತರಲ್ಲಿ ಒಬ್ಬ ಎಸ್ಕೇಪ್ ಆಗಿದ್ದು ಏರ್ ಪೋರ್ಟ್ ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು, ಆತನ ಫೋನ್ ಸ್ವಿಚ್ ಆಫ್ ಆಗಿ ಗೊಂದಲಕ್ಕೆ ಕಾರಣವಾಗಿತ್ತು. ಕೊನೆಗೆ ಆತನ ಫೊಟೋ ಆಧಾರದ ಮೇಲೆ ಏರ್ ಪೋರ್ಟ್ ನಲ್ಲಿ ಪೊಲೀಸ್ ಪತ್ತೆ ಮಾಡಿ ಬೋರಿಂಗ್ ಆಸ್ಪತ್ರೆಗೆ ಕಳುಹಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

08/12/2021 02:10 pm

Cinque Terre

630

Cinque Terre

0

ಸಂಬಂಧಿತ ಸುದ್ದಿ