ದೇವನಹಳ್ಳಿ : ನಡುರಾತ್ರಿ ಬಳಿಕ 2 ಗಂಟೆಯ ಸಮಯದಲ್ಲಿ ಬ್ರಿಟನ್ ನಿಂದ ಭಾರತಕ್ಕೆ ಬಂದ ಯುವಕನಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಆತನನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದೇಶದಿಂದ ಬೆಂಗಳೂರಿಗೆ ಬರುತ್ತಿರುವ ಪ್ರಯಾಣಿಕರಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ರಾತ್ರಿ 2 ಗಂಟೆಗೆ ಬ್ರಿಟನ್ ನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರನ್ನೆಲ್ಲ ಆರ್ ಟಿ ಪಿಸಿಆರ್ ತಪಾಸಣೆಗೆ ಒಳಪಡಿಸಿದಾಗ 18ರ ಹರೆಯದ ಯುವಕನಿಗೆ ಕೊರೊನಾ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ.
ನಿನ್ನೆ ಕೂಡ ವಿದೇಶದಿಂದ ಬಂದ ಪ್ರಯಾಣಿಕರ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಕೊರೊನಾ ಸೋಂಕಿತರ ಸ್ಯಾಂಪಲ್ಸ್ ಜಿನೋಮಿಕ್ ಸೀಕ್ವೆನ್ಸಿಂಗ್‌ಗೆ ಕಳಿಸಲಾಗಿದ್ದು, ಅಲ್ಲಿಂದ ಬರುವ ವರದಿ ಆಧಾರದ ಮೇಲೆ ಒಮಿಕ್ರಾನ್ ವೈರಸ್ ಬಾಧಿಸಿದೆಯೇ ಎಂಬುದರ ಬಗ್ಗೆ ಗೊತ್ತಾಗಲಿದೆ.
Kshetra Samachara
09/12/2021 12:51 pm