ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರೆದಿದ್ದು, ಇಂದು 153 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,59,738ಕ್ಕೆ ಏರಿಕೆಯಾಗಿದೆ.
185 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,37,765ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,376 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 5596 ಸಕ್ರಿಯ ಪ್ರಕರಣಗಳಿವೆ.
Kshetra Samachara
17/12/2021 07:38 pm