ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಕ್ವಾರಂಟೈನ್ ಗೆ ಒಳಪಟ್ಟು ಅಗತ್ಯ ಚಿಕಿತ್ಸೆ ಪಡೆಯುವುದರೊಂದಿಗೆ ತಮ್ಮ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಕೊರೊನಾ ಹಾಟ್ ಸ್ಪಾಟ್ ಆಗುತ್ತಾ ಸಚಿವರು ಭೇಟಿ ಕೊಟ್ಟ ಚಿಕ್ಕಬಾಣಾವಾರ ಸೋಲದೇವನಹಳ್ಳಿ...? ಹೌದು ಕಳೆದೆರೆಡು ದಿನಗಳ ಹಿಂದೆ ಸೋಲದೇವನಹಳ್ಳಿಯ ಆಚಾರ್ಯ ಕಾಲೇಜಿಗೆ ಭೇಟಿ ನೀಡಿದ್ದ ಶಿಕ್ಷಣ ಸಚಿವರು, ಸಕಾಲ ಮಿತ್ರ ಉದ್ಘಾಟನೆ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಸಚಿವರ ಜೊತೆ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಮರಿಸ್ವಾಮಿ ಕೂಡ ಪಾಲ್ಗೊಂಡಿದ್ದರು.
Kshetra Samachara
02/01/2022 01:58 pm