ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 15ರಿಂದ18 ವಯಸ್ಸಿನ ಮಕ್ಕಳ ಲಸಿಕಾಕರಣ ಅಭಿಯಾನಕ್ಕೆ ಸಿಎಂ ಚಾಲನೆ

ಬೆಂಗಳೂರು: 15-18ನೇ ವಯಸ್ಸಿನ ಮಕ್ಕಳಿಗೆ ಕೊರೊನಾ ನಿರೋಧಕ ಲಸಿಕೆ ನೀಡುವ ಅಭಿಯಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಗೋವಿಂದರಾಜನಗರದ ಮೂಡಲಪಾಳ್ಯದಲ್ಲಿ ಬಿಬಿಎಂಪಿ ಪ್ರೌಢಶಾಲೆಯಲ್ಲಿ ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿ ಸಿಎಂ ಪಾಲ್ಗೊಂಡಿದ್ದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಮಕ್ಕಳನ್ನು ನೋಡಿ ಸಂತೋಷವಾಯಿತು. ಬೆಂಗಳೂರಿನ ಪ್ರದೇಶದಲ್ಲಿ ಇಂತಹ ವ್ಯವಸ್ಥಿತ ಶಾಲೆ ಇದೆ ಎನ್ನುವುದನ್ನು ಸೋಮಣ್ಣ ತೋರಿಸಿದ್ದಾರೆ. ಈ ಲಸಿಕೆ ಕಾರ್ಯಕ್ರಮ ಹೊಸ ವರ್ಷದಲ್ಲಿ ನಡೆಯುತ್ತಿದೆ. ಹೊಸವರ್ಷದಂದು ಹೊಸ ಅಭಿಯಾನ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಪರಿಣಾಮದಿಂದ ಈ ಲಸಿಕೆ ಅಭಿಯಾನ ನಡೆಯುತ್ತಿದೆ. ಸುರಕ್ಷಿತ ಆರೋಗ್ಯ ನಿಮ್ಮದಾಗಲಿ ಎಂದು ಮಕ್ಕಳಿಗೆ ಆಶಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಸಚಿವರುಗಳಾದ ವಿ. ಸೋಮಣ್ಣ, ಸಚಿವ ಸುಧಾಕರ್, ಅಶ್ವಥ್ ನಾರಾಯಣ್, ಬೈರತಿ ಬಸವರಾಜ್‌ ಭಾಗಿಯಾಗಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸೇರಿದಂತೆ ಆರೋಗ್ಯಾಧಿಕಾರಿಗಳು ಉಪಸ್ಥಿತಿ

Edited By : Manjunath H D
PublicNext

PublicNext

03/01/2022 01:25 pm

Cinque Terre

32.31 K

Cinque Terre

0

ಸಂಬಂಧಿತ ಸುದ್ದಿ