ಆನೇಕಲ್: ಇಂದಿನಿಂದ 15ರಿಂದ 18 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸೂರ್ಯನಗರದ ನಾರಾಯಣ ಪಿಯು ಕಾಲೇಜಿನಲ್ಲಿ 400 ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು.
ಆರೋಗ್ಯ ಇಲಾಖೆ ಸಿಬ್ಬಂದಿ, ಮಕ್ಕಳಿಗೆ ಕೋವಿಡ್ ಲಸಿಕೆ ನೀಡಿದರು. ಈ ಸಂದರ್ಭ ಲಸಿಕೆ ಪಡೆದ ವಿದ್ಯಾರ್ಥಿಗಳು ಮಾತನಾಡಿ, "ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಮೂಲಕ ಆತ್ಮವಿಶ್ವಾಸ, ಧೈರ್ಯದಿಂದ ಕಾಲೇಜಿಗೆ ಬರಲು ಸಹಕಾರ ನೀಡಿದ್ದಾರೆ. ಇಷ್ಟು ದಿನ ನಮಗೆ ಭಯದಲ್ಲಿಯೇ ಕಾಲೇಜಿಗೆ ಬರಬೇಕಾಗಿತ್ತು. ಈಗ ಸ್ವಲ್ಪ ಧೈರ್ಯ ಬಂದಿದೆ ಎಂದರು.
ಕಾಲೇಜು ಆಡಳಿತ ಮಂಡಳಿ ಡೀನ್ ಕಲ್ಯಾಣ್ ಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಮಹತ್ತರವಾದ ಕಾರ್ಯಕ್ರಮ ಹಮ್ಮಿಕೊಂಡು ಕೋವಿಡ್ ಲಸಿಕೆ ನೀಡಲು ಮುಂದಾಗಿರುವುದು ಶ್ಲಾಘನೀಯ ಎಂದು ಹೇಳಿದರು.
Kshetra Samachara
03/01/2022 09:58 pm