ಬೆಂಗಳೂರು: ಕೋವಿಡ್ ಪ್ರಕರಣಗಳು ಗಣನೀಯವಾಗಿ ಏರಿಕ ಕಂಡುಬರ್ತಿದ್ದಂತೆ ಎಚ್ಚೆತ್ತು ಕೊಂಡಿರುವ ರಾಜ್ಯ ಸರ್ಕಾರ ಇಂದು ಮೂರನೇ ಡೋಸ್ ( ಬೂಸ್ಟರ್ ಡೋಸ್ ) ನೀಡುತ್ತಿದೆ.60 ವರ್ಷ ಮೇಲ್ಪಟ್ಟ ಅನಾರೋಗ್ಯ ಪೀಡಿರು, ಆರೋಗ್ಯ ಕಾರ್ಯಕರ್ತರು,ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ಬೂಸ್ಟರ್ ಡೋಸ್ ಲಸಿಕೆ ವಿತರಣೆ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿದರು.
ಇದೇ ವೇಳೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿ ಹಲವರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಆರೋಗ್ಯ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವವರು, ಪೊಲೀಸ್ ಸೇರಿದಂತೆ ಇನ್ನಿತರ ಮುಂಚೂಣಿ ಕಾರ್ಯಕರ್ತರು, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಇತರ ದೀರ್ಘಕಾಲದ ಕಾಯಿಲೆಗಳಂತಹ ಸಹ ಅಸ್ವಸ್ಥತೆಗಳನ್ನು ಹೊಂದಿರುವ 60 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ವೈದ್ಯರ ಸಲಹೆಯ ಮೇರೆಗೆ ಮುನ್ನೆಚ್ಚರಿಕೆ ಡೋಸ್ ಅನ್ನು ಪಡೆಯುವ ಆಯ್ಕೆ ಹೊಂದಿರುತ್ತಾರೆ.
PublicNext
10/01/2022 01:21 pm