ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕ್ತಿರೋ ಬೆನ್ನಲ್ಲೆ ಪೊಲೀಸ್ ಇಲಾಖೆಗೂ ಕೊರೊನಾ ಸುನಾಮಿ ಅಪ್ಪಳಿಸಿದೆ.
ಸದ್ಯ ನಗರದಲ್ಲಿರೋ ಎಸಿಬಿ ಮುಖ್ಯ ಕಚೇರಿಯಲ್ಲೂ ಕೊರೊನಾ ಶಾಕ್ ನೀಡಿದೆ. ರೇಸ್ ಕೋರ್ಸ್ ರಸ್ತೆಯಲ್ಲಿ ಖನಿಜ ಭವನದಲ್ಲಿರುವ ಎಸಿಬಿ ಕಚೇರಿಯಲ್ಲಿ 15 ಮಂದಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡಿದೆ.
ಪಾಸಿಟಿವ್ ಆದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ಜು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಮುಂಜಾಗ್ರತ ಕ್ರಮವಾಗಿ ಕಚೇರಿ ಸ್ಯಾನಿಟೈಜ್ ಮಾಡಲಾಗುತ್ತಿದೆ.
ಕಚೇರಿಯ ಉಳಿದವರಿಗೂ ಕೋವಿಡ್ ಟೆಸ್ಟ್ ಮಾಡಿಸಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಸೋಂಕು ಕಂಡು ಬಂದ ಸಿಬ್ಬಂದಿಗೆ ಸೌಮ್ಯ ಲಕ್ಷಣಗಳು ಕಂಡುಬಂದಿದ್ದು, ಎಲ್ರೂ ಮನೆಯಲ್ಲೇ ಐಸೋಲೇಷನ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
PublicNext
12/01/2022 02:23 pm