ಆನೇಕಲ್: ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣ ಸಂಖ್ಯೆ ದುಪ್ಪಟ್ಟಾಗುತ್ತಿದೆ. ನೆನ್ನೆ ಒಂದೇ ದಿನದಲ್ಲಿ 544 ಪ್ರಕರಣಗಳು ದಾಖಲಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಪ್ರತಿನಿತ್ಯ ಕೋವಿಡ್ ಟೆಸ್ಟ್ ಮಾಡಿಸುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಆನೇಕಲ್‌ನ ಸರಕಾರಿ ಆಸ್ಪತ್ರೆ ಮುಂಭಾಗದಲ್ಲಿ ಜನ ಜಾತ್ರೆಯಂತಹ ವಾತಾವರಣ ಕಂಡುಬಂದಿತ್ತು. ತಾಲ್ಲೂಕಿನಲ್ಲಿ ಒಟ್ಟು 2137 ಕೋವಿಡ್ ಪ್ರಕರಣಗಳು ಇದುವರೆಗೂ ದಾಖಲಾಗಿದ್ದು, ಅದರಲ್ಲಿ 2015 ಮಂದಿ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನುಳಿದವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಸಂಖ್ಯೆ ಸಹ ಹೆಚ್ಚು ಮಾಡಿದ್ದು, ಪ್ರತಿದಿನ 5ರಿಂದ 6 ಸಾವಿರ ಮಂದಿಗೆ ಟೆಸ್ಟ್ ಮಾಡಲಾಗುತ್ತಿದೆ. ಜನರು ಇನ್ನು ಕೂಡ ನಿರ್ಲಕ್ಷ್ಯ ತೋರುತ್ತಿದ್ದಾರೆ. ಸಾಮಾಜಿಕ ಅಂತರ ಇಲ್ಲದೆ, ಮಾಸ್ಕ್ ಧರಿಸದೆ ಓಡಾಡುತ್ತಿದ್ದು ಇನ್ನಾದರೂ ಎಚ್ಚೆತ್ತುಕೊಳ್ಳಿ ಎಂಬುದೇ ನಮ್ಮ ಆಶಯ.
Kshetra Samachara
14/01/2022 09:32 am