ಬೆಂಗಳೂರು: ರಾಜ್ಯದಲ್ಲಿ ಇಂದು 48,049 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು 22 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.
ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ನೀಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕೋವಿಡ್ ಖಚಿತತೆ ಪ್ರಮಾಣ 19.23%ದಷ್ಟಿದೆ. ಇಂದು 18,115 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ. ಒಟ್ಟಾರೆಯಾಗಿ ಇಂದು ರಾಜ್ಯಾದ್ಯಂತ 2,49,832 ಜನರನ್ನು ಕೋವಿಡ್ ಖಚಿತತೆಯ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಇನ್ನು ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 29,608 ಜನರಿಗೆ ಕೊರೊನಾ ಸೋಂಕು ತಗುಲಿದೆ. ಹಾಗೂ 2ಲಕ್ಷ 23 ಸಾವಿರಕ್ಕೂ ಅಧಿಕ ಸಕ್ರಿಯ ಕೊರೊನಾ ಪ್ರಕರಣಗಳಿವೆ. ಬೆಂಗಳೂರಲ್ಲಿ ಇಂದು 6 ಜನ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
PublicNext
21/01/2022 07:26 pm