ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರಿಗೆ ಕೊವೀಡ್ ತಗುಲಿರುವುದು ದೃಢಪಟ್ಟಿದೆ.
ಈ ಬಗ್ಗೆ ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಅವರು, 'ನನಗೆ ಇಂದು ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳಿವೆ ಹಾಗೂ ನಾನು ವೈದ್ಯಕೀಯ ಸಲಹೆಯಂತೆ ಹೋಂ ಐಸೋಲೇಷನ್‌ನಲ್ಲಿ ಇದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವವರು ಎಚ್ಚರಿಕೆಯಿಂದ ಇರುವಂತೆ ಹಾಗೂ ಅಗತ್ಯ ಬಿದ್ದಲ್ಲಿ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡುತ್ತೇನೆ' ಎಂದು ಹೇಳಿದ್ದಾರೆ.
ಈ ಹಿನ್ನೆಲೆ ಬಿಬಿಎಂಪಿ ಆಡಳಿತ ಕೆಲಸಕ್ಕೆ ಕೆಲ ದಿನಗಳ ಕಾಲ ಅಡ್ಡಿಯಾಗಲಿದೆ. ಶೀತ, ನೆಗಡಿ ಹಾಗೂ ಜ್ವರದಿಂದ ಗೌರವ್ ಗುಪ್ತ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಡಾಕ್ಟರ್ ಸಂಪರ್ಕ ಮಾಡಿದಾಗ ಕೊವೀಡ್ ದೃಢಪಟ್ಟಿದೆ.
Kshetra Samachara
26/01/2022 11:43 am