ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು ಇಂದು 22,427 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 16,48,758ಕ್ಕೆ ಏರಿಕೆಯಾಗಿದೆ.
18,734 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 14,16,078ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 8 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವರೆಗೂ ಒಟ್ಟು 16,534 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 2,16,145 ಸಕ್ರಿಯ ಪ್ರಕರಣಗಳಿವೆ.
Kshetra Samachara
26/01/2022 07:56 pm