ಬೆಂಗಳೂರು: ನಗರದಲ್ಲಿ ಇಂದು 10,692 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,20,890ಕ್ಕೆ ಏರಿಕೆಯಾಗಿದೆ.
ಇದೇ ಸಮಯದಲ್ಲಿ ಬೆಂಗಳೂರಿನ 8,813 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 15,70,258ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 12 ಜನ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,593 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 1,34,038 ಸಕ್ರಿಯ ಪ್ರಕರಣಗಳಿವೆ.
Kshetra Samachara
31/01/2022 07:50 pm